ನಿರಂತರ ಯೋಗಾಭ್ಯಾಸ ದಿಂದ ಮಕ್ಕಳಲ್ಲಿ ಆತ್ಮ ವಿಶ್ವಾಸ – ವೃದ್ಧಿ ಬಿ.ಎಸ್ ಪಾಟೀಲ.
ಇಂಡಿ ಫೆ.08

ಯೋಗವು ಮಕ್ಕಳಲ್ಲಿ ಮಾನಸಿಕ, ಆಧ್ಯಾತ್ಮಿಕ, ದೈಹಿಕ ಮತ್ತು ಭಾವನಾತ್ಮಕ ಯೋಗ ಕ್ಷೇಮವನ್ನು ಬೆಳೆಸಿ,ಸಕಾರಾತ್ಮಕ ಆರೋಗ್ಯಕರ ಜೀವನವನ್ನು ಉತ್ತೇಜಿಸುತ್ತದೆ ಎಂದು ಯೋಗ ಶಿಕ್ಷಕ ಬಿ.ಎಸ್ ಪಾಟೀಲ ಹೇಳಿದರು. ಶನಿವಾರ ದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ‘ಅಂಗೈಯಲ್ಲಿ ಆರೋಗ್ಯ-ಯೋಗ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದರು. ನಿರಂತರ ಯೋಗಾ ಭ್ಯಾಸವು ಮಕ್ಕಳಲ್ಲಿ ಆತ್ಮ ವಿಶ್ವಾಸ, ಉತ್ತಮ ಸಂವಹನ, ತಂಡ ಮನೋಭಾವದ ಮೌಲ್ಯಗಳನ್ನು ಹೆಚ್ಚಿಸುತ್ತದೆ. ಯೋಗ ದಿಂದ ರೋಗ ನಿರೋಧಕ ಶಕ್ತಿ ಕೂಡ ಬಲ ಗೊಳ್ಳುತ್ತದೆ ಎಂದು ಹೇಳಿದರು. ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಯೋಗ ಪದ್ಧತಿ ಭಾರತದ ಆಸ್ತಿ, ಭಾರತವು ವಿಶ್ವಕ್ಕೆ ಯೋಗದ ಮೂಲಕ ಶಾಂತಿಯನ್ನು ರಫ್ತು ಮಾಡಿದೆ. ಯೋಗದಿಂದ ಮಕ್ಕಳಲ್ಲಿ ಶಕ್ತಿ, ಸಹಿಷ್ಣುತೆ, ಆತ್ಮ ವಿಶ್ವಾಸ ಬೆಳೆಯುತ್ತದೆ. ಜತೆಗೆ ಮಕ್ಕಳಿಗೆ ಶಿಸ್ತು ಬದ್ಧ ಜೀವನ ರೂಢಿಸುತ್ತದೆ ಎಂದು ಹೇಳಿದರು. ಶಿಕ್ಷಕ ಎಸ್.ಆರ್ ಚಾಳೇಕರ ಮಾತನಾಡಿ, ಆಧುನಿಕ ಜೀವನ ಪದ್ಧತಿಯಲ್ಲಿ ಒತ್ತಡ ಹಾಗೂ ಆಹಾರ ಪದ್ಧತಿಯಿಂದಾಗಿ ದೇಹ ಸದೃಢ ವಾಗಿರಲು ಸಾಧ್ಯವಾಗುತ್ತಿಲ್ಲ. ಪೂರ್ಣ ಆಯಸ್ಸು ಪಡೆಯ ಬೇಕಾದರೆ ಯೋಗಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಕೆಬಿಎಸ್ ಎಸ್.ಡಿ.ಎಂ.ಸಿ ಅಧ್ಯಕ್ಷ ಮಾಳಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರಮೇಶ ಮಠಪತಿ, ಸದಸ್ಯ ರಾಜಶೇಖರ ಗುಡಿ, ಮುಖ್ಯ ಶಿಕ್ಷಕರಾದ ಅನಿಲ ಪತಂಗಿ, ವ್ಹಿ ವೈ ಪತ್ತಾರ ಹಾಗೂ ಶಿಕ್ಷಕರಾದ ಎಸ್ ಎಂ ಪಂಚಮುಖಿ, ಶಾಂತೇಶ ಹಳಗುಣಕಿ, ಜೆ ಸಿ ಗುಣಕಿ, ಎಸ್ ಎನ್ ಡಂಗಿ, ಸಾವಿತ್ರಿ ಸಂಗಮದ, ಎಫ್ ಎ ಹೊರ್ತಿ, ಎಸ್ ವ್ಹಿ ಬೆನೂರ, ಎಸ್ ಬಿ ಕುಲಕರ್ಣಿ, ಎಸ್ ಡಿ ಬಿರಾದಾರ, ಸುಮಿತ್ರಾ ನಂದಗೊಂಡ, ಸುರೇಶ ದೊಡ್ಯಾಳಕರ, ಶೃದ್ಧಾ ಬಂಕಲಗಾ, ಬಿ ಎಸ್ ಹೊಸೂರ, ಪ್ರಜ್ವಲ್ ಕುಲಕರ್ಣಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ವಿವಿಧ ಯೋಗಾಸನಗಳನ್ನು ಮಾಡಿಸಲಾಯಿತು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಶಿವಾನಂದ.ಬಿ.ಹರಿಜನ.ಇಂಡಿ