ಹಾರಕಬಾವಿ ಚೌಡೇಶ್ವರಿ ದೇವಿಯ – ರಥೋತ್ಸವದ ಸಂಭ್ರಮ.
ಕಾನ ಹೊಸಹಳ್ಳಿ ಫೆ.08

ಸಮೀಪದ ಹಾರಕಬಾವಿ ಗ್ರಾಮದ ಶ್ರೀ ಚೌಡೇಶ್ವರಿ ದೇವಿಯ ರಥೋತ್ಸವದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶುಕ್ರವಾರ ಸಂಜೆ 4 ಘಂಟೆಗೆ ವಿಜೃಂಭಣೆ ಯಿಂದ ಜರುಗಿತು. ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹಾಗೂ ತೇರಿಗೆ ಹೂ ಹಾರಗಳೊಂದಿಗೆ ಬಾಳೆ ಗೊನೆ, ತೆಂಗಿನ ಕಾಯಿ, ವಿಭಿನ್ನ ಬಣ್ಣದ ಬಾವುಟಗಳಿಂದ ರಥವನ್ನು ಅಲಂಕರಿಸಲಾಗಿತ್ತು. ಶ್ರೀ ಚೌಡೇಶ್ವರಿಯ ದೇವಿಯ ಮುಕ್ತಿ ಪಟವನ್ನು ಹಾರಕಬಾವಿ ಗ್ರಾ.ಪಂ ಅಧ್ಯಕ್ಷೆ ಬಸಮ್ಮ ಮಂಜುನಾಥ 200, 100 ರೂ.ಗಳಿಗೆ ಹರಾಜಿನಲ್ಲಿ ಪಡೆದು ಕೊಂಡರು. ರಥೋತ್ಸವಕ್ಕೂ ಮುನ್ನ ದೇವಸ್ಥಾನ ದಿಂದ ಶ್ರೀ ಚೌಡೇಶ್ವರಿಯ ಮೂರ್ತಿಯನ್ನು ಮಂಗಳ ವಾದ್ಯದೊಂದಿಗೆ ಹೊತ್ತು ತಂದು ದೇವಾಲಯದ ಸುತ್ತ ಒಂದು ಸುತ್ತು ಪ್ರದಕ್ಷಿಣೆ ಹಾಕಲಾಯಿತು. ಮಧ್ಯಾಹ್ನ 4 ಗಂಟೆಗೆ ರಥಕ್ಕೆ ಶ್ರೀ ಚೌಡೇಶ್ವರಿ ಉತ್ಸವ ಮೂರ್ತಿಯನ್ನು ರಥಕ್ಕೆ ಏರಿಸಲಾಯಿತು. ನಂತರ ಸಾವಿರಾರು ಭಕ್ತರು ದೇವಿಗೆ ಜೈಕಾರ ಹಾಕುತ್ತಾ ರಥವನ್ನು ಮುಖ್ಯ ಬೀದಿಯಲ್ಲಿ ಪಾದಗಟ್ಟೆ ಯವರಿಗೆ ಎಳೆದು ತಂದು ಸ್ವಸ್ಥಾನಕ್ಕೆ ನಿಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಸೇವಾ ಸಮಿತಿ ಪ್ರಮುಖರು, ಜನ ಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಸೇರಿ ಸುತ್ತಮುತ್ತಲ ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು. ಜಾತ್ರಾ ಮಹೋತ್ಸವದಲ್ಲಿ ಮುಂಜಾಗ್ರತಾ ಕ್ರಮವಾಗಿ ಅಹಿಂತಕರ ಘಟನೆಗಳು ನಡೆಯದಂತೆ ಕಾನ ಹೊಸಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸಿದ್ರಾಮ ಬಿದರಾಣಿ ನೇತೃತ್ವದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಲಾಗಿತ್ತು.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಕೆ.ಎಸ್ ವೀರೇಶ್.ಕೆ.ಹೊಸಹಳ್ಳಿ