ಸರಳ ಜೀವನ, ಶುದ್ಧ ಧ್ಯಾನ, ನಿಷ್ಕಲ್ಮಷ ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯ – ಆನಂದ ಕೋಟಗಿ.
ನರೇಗಲ್ಲ ಫೆ.12

ಮೂಢನಂಬಿಕೆಗಳು, ಜಾತಿ ಪದ್ಧತಿ, ಅಸಮಾನತೆಯ ವಿರುದ್ಧ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ. ಸಮ ಸಮಾಜ ಕಟ್ಟುವಲ್ಲಿ ಕಾಯಕ ನಿಷ್ಠೆ ಮೆರೆದ ಕಾಯಕ ಶರಣರ ಕೊಡುಗೆ ಅಪಾರ ಎಂದು ಎಸ್.ಡಿ.ಎಮ್.ಸಿ ಅಧ್ಯಕ್ಷ ಆನಂದ ಕೋಟಗಿ ಹೇಳಿದರು.ಅವರು ಪಟ್ಟಣದ ಸರಕಾರಿ ಕನ್ನಡ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ನರೇಗಲ್ಲ ಶಾಲೆಯಲ್ಲಿ ಕಾಯಕ ಶರಣರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.ಸರಳ ಜೀವನ, ಶುದ್ಧ ಧ್ಯಾನ, ನಿಷ್ಕಲ್ಮಷ ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯವೆಂದು ಸಾರಿದ ಕಾಯಕ ಶರಣರ ವಚನಗಳು ಇಂದಿಗೂ ಚಿರ ಪರಿಚಿತವಾಗಿವೆ ಎಂದರು.ಇದೆ ವೇಳೆ ಶಾಲಾ ಮುಖ್ಯೋಪಾಧ್ಯಾಯ ಬಸವರಾಜ ಕುರಿ ಮಾತನಾಡಿ, ಬಸವಣ್ಣನವರ ಅನುಭವ ಮಂಟಪದಲ್ಲಿ ಎಲ್ಲ ವರ್ಗದ ಶರಣರಿದ್ದರು. ಅವರಲ್ಲಿ ಮಾದಾರ ಚನ್ನಯ್ಯ, ಸಮಗಾರ ಹರಳಯ್ಯ, ಉರಿಲಿಂಗಿಪೆದ್ದಿ ಮಾದಾರ ದೂಳಯ್ಯ, ಡೋಹರ ಕಕ್ಕಯ್ಯ ಎಂಬ ಐವರು ಕಾಯಕ ಶರಣರು ಪ್ರಮುಖರಾಗಿದ್ದರು.ಅವರ ಜೀವನ ಹಾಗೂ ಮೌಲ್ಯಗಳನ್ನು ಸಮಾಜಕ್ಕೆ ಬಿತ್ತರಿಸುವ ನಿಟ್ಟಿನಲ್ಲಿ ಸರ್ಕಾರ ಜಯಂತಿ ಆಚರಣೆ ಮಾಡುತ್ತಿದೆ ಎಂದರು.ಈ ಸಮಯದಲ್ಲಿ ಎನ್.ಎಲ್ ಚೌವಾನ್, ಎಸ್.ಐ ಜಗಾಪುರ, ಎಮ್.ಪಿ ಅಣಗೌಡರ, ಡಿ.ವಿ ಕಳ್ಳಿ, ಜೆ.ಎ ಪಾಟೀಲ, ಎಂ.ಎಸ್ ಮಾಳಶೆಟ್ಟಿ, ರಾಜೇಶ್ವರಿ ತೊಂಡಿಹಾಳ, ಸಿಂಧು ಗುಡಿಸಾಗರ ಸಹ ಶಿಕ್ಷಕರು, ಶಿಕ್ಷಕಿಯರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ ರೋಣ ಗದಗ