ಮಾಹಿತಿ ಹಕ್ಕು ಮತ್ತು ಕಾನೂನು – ಅರಿವು ಕಾರ್ಯಾಗಾರ.
ರಾಯಚೂರು ಫೆ.14

ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಹೋರಾಡುತ್ತಾ ಬಂದಿರುವ ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯು ನಾಡಿನ ಜನರನ್ನು ಸಬಲೀಕರಣ ಕಾರ್ಯದಲ್ಲೂ ನಿರಂತರವಾಗಿ. ಜನರಿಗೆ ಅವರ ಹಕ್ಕುಗಳು ಮತ್ತು ಕಾನೂನನ್ನು ತಮ್ಮ ಸಂವಿಧಾನ ಬದ್ಧ ರಕ್ಷಣೆ ಹಾಗೂ ಸರ್ಕಾರಿ ಕೆಲಸ ಮಾಡಿಸಿ ಕೊಳ್ಳುವಲ್ಲಿ ಹೇಗೆ ಬಳಸಿ ಕೊಳ್ಳಬಹುದೆಂಬ ವಿಚಾರಗಳನ್ನು ತಿಳಿಸುತ್ತಾ ನೆರವಾಗುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವೇದಿಕೆಯು ರಾಜ್ಯಾದ್ಯಂತ ಮಾಹಿತಿ ಹಕ್ಕು ಕಾಯ್ದೆ, ಸಕಾಲ ಮತ್ತು ಕಾನೂನು ಅರಿವು, ತರಬೇತಿ ಶಿಬಿರ/ಕಾರ್ಯಾಗಾರಗಳನ್ನು ನಡೆಸಿ ಕೊಂಡು ಬರುತ್ತಿದೆ ಮತ್ತು ಮುಂದಿನ ತಿಂಗಳುಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಈ ರೀತಿಯ ಕಾರ್ಯಕ್ರಮದ ಅಂಗವಾಗಿ ಇದೇ ಫೆಬ್ರವರಿ 15 ರ ಶನಿವಾರ ದಂದು ರಾಯಚೂರಿನಲ್ಲಿ ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ವತಿಯಿಂದ ಭ್ರಷ್ಟಾಚಾರ ಮತ್ತು ಪ್ರಜಾಪ್ರಭುತ್ವ ಕುರಿತ ವಿಚಾರ ಸಂಕಿರಣ, ಮಾಹಿತಿ ಹಕ್ಕು ಕಾಯ್ದೆ ಮತ್ತು ಕಾನೂನು ಅರಿವು ಕಾರ್ಯಾಗಾರ ಹಾಗೂ ನಾಡ ಪ್ರೇಮಿ ಹೋರಾಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮವು ರಾಯಚೂರಿನ ಅಂಬೇಡ್ಕರ್ ವೃತ್ತದ ಸಮೀಪವಿರುವ ಕರ್ನಾಟಕ ರಾಜ್ಯ ನೌಕರರ ಭವನದಲ್ಲಿ ಬೆಳಗ್ಗೆ ಗಂಟೆ 10:30 ರಿಂದ ಸಂಜೆ 4:30 ರ ತನಕ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಾಡಿನ ಹಿರಿಯ ಹೋರಾಟಗಾರರು ಮತ್ತು ಚಿಂತಕರಾದ ಎಸ್.ಆರ್ ಹಿರೇಮಠ್ ಅವರು ಆಗಮಿಸುತ್ತಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ವೇದಿಕೆಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರು ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ನಾಡಿನ ಹಿರಿಯ ಸಾಮಾಜಿಕ ಹೋರಾಟಗಾರರಾದ ಶ್ರೀ ರಾಘವೇಂದ್ರ ಕುಷ್ಟಗಿ ಅವರನ್ನು ಸನ್ಮಾನಿಸ ಲಾಗುವುದು ಎಂದು ವರದಿಯಾಗಿದೆ.
ನಿರುಪಾದಿ ಕೆ ಗೋಮರ್ಸಿ
ಕಾರ್ಯಕಾರಿ ಸಮಿತಿ ಸದಸ್ಯ,
ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ.
ತಾಲೂಕ ವರದಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ