ಅದ್ಧೂರಿಯಾಗಿ ನಡೆದ ನೀರಮಾನ್ವಿ ಯಲ್ಲಮ್ಮ ದೇವಿಯ ರಥೋತ್ಸವಕ್ಕೆ ಚಾಲನೆ ನೀಡಿದ – ಶಾಸಕ ಹಂಪಯ್ಯ ನಾಯಕ.
ಮಾನ್ವಿ ಫೆ.18

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪ್ರಸಿದ್ಧ ಜಾತ್ರೆ ಯಾದ ನೀರಮಾನ್ವಿ ಯಲ್ಲಮ್ಮ ದೇವಿಯ ರಥೋತ್ಸವ ಲಕ್ಷಾಂತರ ಭಕ್ತರ ನಡುವೆ ಅದ್ಧೂರಿಯಾಗಿ ನಡೆಯಿತು.
ನೀರಮಾನ್ವಿ ಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಕರ್ನಾಟಕದ ನಾನಾ ಜಿಲ್ಲೆಗಳಿಂದ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು.ಶಾಸಕರಾದ ಹಂಪಯ್ಯ ನಾಯಕ, ಡಾ, ಶಿವರಾಜ ಪಾಟೀಲ್, ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಸೇರಿದಂತೆ ನೀರಮಾನ್ವಿ ಗ್ರಾಮದ ಹಿರಿಯರು ಮುಖಂಡರು ಭಾಗಿಯಾಗಿ ರಥೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಾನ್ವಿ ಪೊಲೀಸ್ ಠಾಣೆಯ ಪಿ.ಎಸ್.ಐ ವೀರಭದ್ರಪ್ಪ ಹಿರೇಮಠ ನೇತೃತ್ವದಲ್ಲಿ ನೂರಾರು ಪೊಲೀಸರು ಜಾತ್ರೆಯಲ್ಲಿ ಭಾಗಿಯಾಗಿ ಯಾವುದೇ ಅವಘಡ ಸಂಭವಿಸದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ