ಫೆ 22. ಕ್ಕೆ ನೂತನ ಪದಾಧಿಕಾರಿಗಳ – ಪದಗ್ರಹಣ ಸಮಾರಂಭ.
ಇಲಕಲ್ಲ ಫೆ.21

ಇಲ್ಲಿನ ಜೂನಿಯರ್ ಚೆಂಬರ್ ಇಂಟರ್ ನ್ಯಾಷನಲ್ ಮಹಾಂತ ಶ್ರೀ ಸಿಟಿ ಇಳಕಲ್ಲ (JCI) ಸಂಸ್ಥೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಾಳೆ ದಿನಾಂಕ 22-02-2025 ರಂದು ಸಾಯಂಕಾಲ ಗೊಂಗಡಶೆಟ್ಟಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಹನುಮಂತ ಚುಂಚಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ನೂತನ ಸದಸ್ಯರಿಗೆ ಪ್ರಮಾಣ ವಚನ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ ವಿರುವುದು, ಸಭೆಯ ಸಾನಿಧ್ಯವನ್ನು ಚಿತ್ತರಗಿ ಸಂಸ್ಥಾನ ಮಠದ ಶ್ರೀ ಗುರು ಮಹಾಂತ ಶ್ರೀಗಳು ವಹಿಸಿ ಕೊಳ್ಳುವರು ಕಾರಣ ಈ ಕಾರ್ಯಕ್ರಮಕ್ಕೆ ಎಲ್ಲಾ ಗಣ್ಯರು ಆಗಮಿಸ ಬೇಕೆಂದು ಅಧ್ಯಕ್ಷರು ವಿನಂತಿಸಿದ್ದಾರೆ.
ಜಿಲ್ಲಾ ಮಟ್ಟದ ವಿಶೇಷ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಅಬ್ದುಲ್.ಗಫಾರ್.ತಹಶೀಲ್ದಾರ.ಇಲಕಲ್ಲ.ಬಾಗಲಕೋಟ