ರೈತ ದೇಶದ ಬೆನ್ನೆಲುಬು ರೈತರ ಬೆಳೆಗಳಿಗೆ ಸೂಕ್ತ ಬೆಲೆ – ಸಿಗಬೇಕು ಎಂದು ಆಗ್ರಹಿಸಿದರು.
ದೇವದುರ್ಗ ಫೆ.22

ಇಲ್ಲಿನ ಜಿಲ್ಲಾ ರೈತ ಸಂಘ ಮತ್ತು ತಾಲೂಕಾ ರೈತ ಸಂಘದ ಪದಾಧಿಕಾರಿಗಳು ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಬಗೆ ಹರಿಸುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಮಾತನಾಡಿ ರೈತ ದೇಶದ ಬೆನ್ನೆಲುಬು ರೈತರ ಬೆಳೆಗಳಿಗೆ ಸೂಕ್ತ ಬೆಲೆ ಸಿಗಬೇಕು ಮತ್ತು ಬೆಳೆ ನಷ್ಟಕ್ಕೆ ಪರಿಹಾರ ಸಿಗಬೇಕು. ಈಗಾಗಲೇ ಬೇಸಿಗೆ ಕಾಲ ಶುರುವಾಗುತ್ತಿದ್ದು ಪಂಚಾಯತ ಅಭಿವೃದ್ಧಿ ಅಧಿಕಾರಿಗಳು (PDO) ಪ್ರತಿ ಗ್ರಾಮಗಳ ಸರ್ವೇ ಕಾರ್ಯ ಮಾಡಿ ಜನ ಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ನೋಡಿ ಕೊಳ್ಳಬೇಕು. ನಿರ್ಲಕ್ಷ್ಯ ವಹಿಸಿ ಬೇಜವಾಬ್ದಾರಿ ತೋರಿದ ಅಧಿಕಾರಿಗಳ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಆಗ್ರಹಿಸ ಬೇಕಾಗುತ್ತದೆ ಎಂದರು.
ಜಿಲ್ಲಾ ಮಟ್ಟದ ವಿಶೇಷ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಅಬ್ದುಲ್.ಗಫಾರ.ತಹಶೀಲ್ದಾರ.ಇಲಕಲ್ಲ. ಬಾಗಲಕೋಟ