ವಾರ್ಷಿಕ ಸ್ನೇಹ ಸಮ್ಮೇಳನ 2024/25 ನೇ. ಸಾಲಿನ ಹಾಗೂ ಎಸ್.ಎಸ್.ಎಲ್.ಸಿ – ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭ ಜರುಗಿತು.
ಇಳಕಲ್ಲ ಫೆ.24

ಇಲ್ಲಿನ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ 2024-25. ಸಾಲಿನ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ನೆರವೇರಿತು, ಸಮಾರಂಭದಲ್ಲಿ ಮಕ್ಕಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು, ಮಕ್ಕಳ ರಂಗು ರಂಗಿನ ವೇಷ ಭೂಷಣದಲ್ಲಿ ಸಭಿಕರನ್ನು ರಂಜಿಸಿದರು. ಕ್ಷೇತ್ರದ ಶಾಸಕರಾದ ಶ್ರೀ ವಿಜಯಾನಂದ ಕಾಶಪ್ಪನವರನ್ನು ಗೌರವಿಸಿ ಸತ್ಕರಿಸಲಾಯಿತು, ಸತ್ಕಾರ ಸ್ವೀಕರಿಸಿ ಮಾತನಾಡಿದ ಶಾಸಕರು ಮೌಲಾನಾ ಆಜಾದ ಅಲ್ಪಸಂಖ್ಯಾತ ಶಿಕ್ಷಣ ನಿರ್ದೇಶನಾಲಯ ಈ ಶಾಲೆಯು ಮಕ್ಕಳ ನೈಜ ಪ್ರತಿಭೆಯನ್ನು ಹೊರ ತರುವಲ್ಲಿ ಯಶಸ್ವಿ ಯಾಗಿದೆ. ಇಲ್ಲಿನ ವಿಧ್ಯಾರ್ಥಿಗಳು ಕಲಿಕೆಯ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿ ಕೊಂಡಿರುವುದು ಸಂತೋಷದ ವಿಚಾರ ಎಂದರು.

ಈ ಸಂದರ್ಭದಲ್ಲಿ ಮೌಲಾನಾ ಅಜಾದ ಶಾಲೆಯ ತಾಲೂಕಾ ಸಂಯೋಜಕ ಹಾಗೂ ಮಾಧ್ಯಮ ಮಿತ್ರರು ಆದ ಖಾಜಾಸಾಬ ಸೋಲಾಪುರ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದರು. ವೇದಿಕೆಯಲ್ಲಿ ನಗರ ಯೋಜನಾ ಪ್ರಾದಿಕಾರದ ಅಧ್ಯಕ್ಷ ಶ್ರೀ ರಾಘವೇಂದ್ರ ಚಿಂಚಮಿ ನಗರ ಸಭಾ ಸದಸ್ಯರಾದ ಸುರೇಶ ಜಂಗ್ಲಿ, ಅಮೃತ ಬಿಜ್ಜಳ ಮುಖಂಡರಾದ ಶರಣಪ್ಪ ಆಮದಿಹಾಳ, ಶಬ್ಬೀರ ಬಾಗವಾನ, ಸಯ್ಯದ ಸಿರಾಜ ಕಾಜಿ, ಅಹ್ಮದ ಬಾಗವಾನ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಮಟ್ಟದ ವಿಶೇಷ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಅಬ್ದುಲ್.ಗಫಾರ್.ತಹಶೀಲ್ದಾರ.ಇಲಕಲ್ಲ.ಬಾಗಲಕೋಟ