ಇಲಕಲ್ಲ ನಗರದಲ್ಲಿ ರಕ್ತದಾನ ಶಿಬಿರ ಹಾಗೂ ಇಲಕಲ್ಲ ನಗರ ಸಭೆಯ ಪೌರ ಕಾರ್ಮಿಕರಿಗೂ ಮತ್ತು ಇವರ ಪ್ರತಿಭಾವಂತ – ಮಕ್ಕಳಿಗೆ ವಿಶೇಷ ಸನ್ಮಾನ ಸಮಾರಂಭ ಜರುಗುವುದು.
ಇಲಕಲ್ಲ ಫೆ.24

ಇಲ್ಲಿನ ದೃಡ ಸಂಕಲ್ಪ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಘ ಇಲಕಲ್ಲ (ರಿ) ಇವರ ಸಂಕಲ್ಪ ಫೌಂಡೇಶನ ಇಲಕಲ್ಲ ವತಿಯಿಂದ ದಿನಾಂಕ 26-02-2025, ಬುಧುವಾರ ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಏರ್ಪಡಿಸಿದ್ದು, ನಗರ ಸಭೆಯಲ್ಲಿ ಪೌರ ಕಾರ್ಮಿಕರಿಗೆ ಅವರ ಸೇವಾ ಕಾರ್ಯ ಗುರುತಿಸಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಮತ್ತು ಪೌರ ಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೂ ಸನ್ಮಾನ್ ಮತ್ತು ಸತ್ಕಾರ ಸಮಾರಂಭ ಏರ್ಪಡಿಸಲಾಗಿದೆ ಎಂದು ನಗರ ಘಟಕದ ಅಧ್ಯಕ್ಷ ಈರಣ್ಣ ನಾಗರಹಾಳ ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಅದೇ ದಿನ ಸಾಯಂಕಾಲ ಕಂಠಿ ಸರ್ಕಲ್ಲದಲ್ಲಿ ರಾಕಿಂಗ ಸ್ಟಾರ್ ಯಶ್ ಮೆಲೋಡಿಸ್ ಆರ್ಕೆಸ್ಟ್ರಾ ತಂಡ ಬಾಗಲಕೋಟೆ ಇವರಿಂದ ರಸಮಂಜರಿ ಕಾರ್ಯಕ್ರಮ ನಡೆಸಲಾಗುವುದು. ಇದರಲ್ಲಿ ಉತ್ತರ ಕರ್ನಾಟಕದ ಜಾನಪದ ಕೋಗಿಲೆ ಪರಸು ಕೊಲ್ಲೂರ ಅವರಿಂದ ಸಂಗೀತ ಕಾರ್ಯಕ್ರಮವಿದ್ದು. ಶ್ರೀ ಗುರು ಮಹಾಂತ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಶಾಸಕರಾದ ಶ್ರೀ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಲಿದ್ದಾರೆ. ಎಲ್ಲಾ ಕಲಾಭಿಮಾನಿಗಳು ಆಗಮಿಸ ಬೇಕೆಂದು ವಿನಂತಿಸಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಸಂಘದ ಇನ್ನುಳಿದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಮಟ್ಟದ ವಿಶೇಷ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಅಬ್ದುಲ್.ಗಫಾರ್.ತಹಶೀಲ್ದಾರ.ಇಲಕಲ್ಲ.ಬಾಗಲಕೋಟೆ