ರಾಜ್ಯ ಸರಕಾರದ ವಿರುದ್ಧ ಮಾನ್ವಿಯಲ್ಲಿ – ಜೆಡಿಎಸ್ ಪಕ್ಷದಿಂದ ಪ್ರತಿಭಟನೆ.
ಮಾನ್ವಿ ಮಾ.11

ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅನುದಾನವನ್ನು ದುರ್ಬಳಕೆ ಮಾಡಿರುವುದನ್ನು ಖಂಡಿಸಿ ಮಾನ್ವಿಯಲ್ಲಿ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ಸರಕಾರ ಗ್ಯಾರಂಟಿ ಯೋಜನೆ ನೆಪದಲ್ಲಿ ಎಸ್ಸಿ/ಎಸ್ಟಿ ಅನುದಾನ ದುರ್ಬಳಕೆ ಮಾಡುತ್ತಿದ್ದಾರೆಂದರೆ ಶೋಷಿತ ಜನರಿಗೆ ಮಾಡಿದ ಅನ್ಯಾಯ ಎಂದು ಕಿಡಿಕಾರಿದರು.
ಸರಕಾರ ಬಂದಾಗಿನಿಂದ ನೋಡಿದರೆ ಅಭಿವೃದ್ಧಿ ಅನ್ನೋದು ಯಾವುದು ಇಲ್ಲ. ಸರ್ಕಾರ ಬರಿ ಗ್ಯಾರಂಟಿ ಯೋಜನೆಯ ನೆಪದಲ್ಲಿ ಇದೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಜನಾಂಗಕ್ಕೆ ಅಭಿವೃದ್ಧಿ ಮಾಡುವುದು ಇದೇನಾ ದ್ರೋಹ ಬಗೆಯುವುದಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ