ಏ 5. ರಂದು ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ – ಬೇಸಿಗೆ ತರಬೇತಿ ಶಿಬಿರ ಆಯೋಜನೆ.
ಮಾನ್ವಿ ಮಾ.13
ಏ 5. ರಂದು ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳಿಗೆ ಬೇಸಿಗೆ ತರಬೇತಿ ಶಿಬಿರ ಹಮ್ಮಿ ಕೊಳ್ಳಲಾಗಿದ್ದು, ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ತಾಲೂಕ ಘಟಕದ ಅಧ್ಯಕ್ಷ ಅರುಣಕುಮಾರ ಚಂದಾ ತಿಳಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ,ವೀರಶೈವ ಲಿಂಗಾಯತ ಸಮಾಜದ ವಿದ್ಯಾರ್ಥಿಗಳು 10 ನೇ. ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆಯುವುದಕ್ಕೆ ಸಾಧ್ಯವಾಗಲಿ ಎನ್ನುವ ಉದ್ದೇಶದಿಂದ ಪಟ್ಟಣದ ಪ್ರಗತಿ ಪಿ.ಯು.ಕಾಲೇಜಿನಲ್ಲಿ ತರಬೇತಿ ನಡೆಯಲಿದೆ ಎಂದರು.

ವೀರಶೈವ ಲಿಂಗಾಯತ ಸಮಾಜದ 9 ನೇ. ತರಗತಿಯಲ್ಲಿ ಉತ್ತೀರ್ಣರಾಗಿ ಎಸ್.ಎಸ್.ಎಲ್.ಸಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗಾಗಿ 45 ದಿನಗಳ ಬೇಸಿಗೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು. ತರಬೇತಿ ಶಿಬಿರವನ್ನುರಾಯಚೂರು ಶಾಸಕ ಡಾ, ಶಿವರಾಜ ಪಾಟೀಲ್ ಉದ್ಘಾಟಿಸಲಿದ್ದು. ನಾನಾ ಮಠದ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ