ಬಕ್ರೀದ್ ಹಬ್ಬದ ನಿಮಿತ್ತ ಶಾಂತಿ ಸಭೆ.

ಕೂಡ್ಲಿಗಿ ಜೂನ್.23

ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಸದಾ ಸಿದ್ಧವಾಗಿದ್ದು, ಯಾವುದೇ ಅಹಿತಕರ ಘಟನೆ ಆಗದಂತೆ ಶಾಂತತೆಯಿಂದ ಹಬ್ಬ ಆಚರಿಸಬೇಕು ಎಂದು ಪಿಎಸ್ಐ ಎರಿಯಪ್ಪ ಅಂಗಡಿ ಹೇಳಿದರು. ತಾಲೂಕಿನ ಕಾನ ಹೊಸಹಳ್ಳಿ ಪೊಲೀಸ್‌ ಠಾಣೆಯಲ್ಲಿ ಗುರುವಾರ ಸಂಜೆ ಬಕ್ರೀದ್‌ ಹಬ್ಬದ ನಿಮಿತ್ತ ನಡೆದ ಶಾಂತಿ ಸಭೆಯಲ್ಲಿ ಸಭೆ ಉದ್ದೇಶಿಸಿ ಮಾತನಾಡಿ, ಜೂನ್ 29-30ರಂದು ನಡೆಯುವ ಬಕ್ರೀದ್‌ ಹಬ್ಬದ ನಿಮಿತ್ತ ಹಿಂದೂ ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಶಾಂತಿಯಿಂದ ಹಬ್ಬ ಆಚರಿಸಬೇಕು. ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಯಾವುದೇ ಸಮುದಾಯವಾಗಿರಲಿ ಹಬ್ಬಗಳ ಆಚರಣೆ ವೇಳೆ ಅನ್ಯ ಧರ್ಮದ ಬಗ್ಗೆ ತಾತ್ಸಾರ ಮಾಡದೆ. ಶಾಂತಿಯುತವಾಗಿ ಆಚರಿಸಿದಾಗ ಮಾತ್ರ ಸಹಭಾಳ್ವೆ ಸಾಧ್ಯ. ಹೀಗಾಗಿ ಶಾಂತಿ ಭಂಗ ತರುವ ಯಾವುದೇ ಹೇಳಿಕೆಗಳು. ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಮಾಡುವುದು. ಫಾರ್ವಡ್ ಮಾಡಿ ಮತ್ತೊಬ್ಬರಿಗೆ ನೋವುಂಟು ಮಾಡುವುದು ಕಾನೂನಿನಲ್ಲಿ ಅಪರಾಧವಾಗಿದ್ದು, ಸಭೆಯಲ್ಲಿನ ಮುಖಂಡರು ಯುವಕರಿಗೆ ತಿಳಿ ಹೇಳಬೇಕೆಂದು ಮನವಿ ಮಾಡಿ. ಕಾನೂನು ಉಲ್ಲಂಘಿಸುವವರ ವಿರುದ್ದ ನಿರ್ದಾಕ್ಷ್ಯಿಣ್ಯವಾಗಿ ಕ್ರಮ ಜರುಗಿಸಲಾಗುವುದು. ಶಾಂತಿ ಭಂಗ ತರುವವರ ವಿರುದ್ದ ಪೊಲೀಸರು ಕಣ್ಗಾವಲಿಟ್ಟಿದ್ದು. ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಈ ಸಭೆಯಲ್ಲಿ ಪಿಎಸ್ಐ ಅಪರಾಧ ವಿಭಾಗ ನಾಗರತ್ನಮ್ಮ ಹಾಗೂ ಸಿಬ್ಬಂದಿ ಇದ್ದರು. ಈ ವೇಳೆ ಮುಸ್ಲಿಂ ಸಮುದಾಯದ ಮುಖಂಡರಾದ ಹೊಸಹಳ್ಳಿ ಅರನ್ ಭಾಷಾ, ಚಿಕ್ಕ ಜೋಗಿಹಳ್ಳಿ ಕಲಂದರ್, ಎಂಎಸ್‌ಟಿ ರಾಮ್ದುಲ್, ಕಲಂದರ್ ಮುಖಂಡರು, ಬಣವಿಕಲ್ಲು ಅಲ್ಲಾ ಬಕ್ಸ್, ಯಜಾದ್ ಅಹ್ಮದ್ ಸೇರಿದಂತೆ ಮುಸ್ಲಿಂ ಸಮುದಾಯದ ಅನೇಕ ಮುಖಂಡರು ಉಪಸ್ಥಿತಿರಿದ್ದರು. ಜಿಲ್ಲಾ ವರದಿಗಾರರು:ರಾಘವೇಂದ್ರ.ಸಾಲುಮನಿ. ಕೂಡ್ಲಿಗಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button