ರಾಜ್ಯ ಸರಕಾರದ ವಿರುದ್ಧ ಗುಡುಗಿದ – ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ.
ಮಾನ್ವಿ ಆ.12

ರಾಜ್ಯ ಸರಕಾರ ಎಸ್ಸಿ/ಎಸ್ಟಿ ಅನುದಾನ ದುರ್ಬಳಕೆ ಮಾಡಿ ಕೊಂಡಿದೆ, ಮುಂದಿನ ದಿನಗಳಲ್ಲಿ ಜನರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುತ್ತಾರೆಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಆಕ್ರೋಶ ವ್ಯಕ್ತಪಡಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಧ್ಯಾನ ಮಂದಿರದಲ್ಲಿ ನಡೆದ ಮಾನ್ವಿ ವಿಧಾನ ಮಂಡಲದ ಬಿಜೆಪಿ ತಾಲೂಕ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಾನ್ವಿ ವಿಧಾನ ಸಭಾ ಕ್ಷೇತ್ರದಲ್ಲಿ ನಾಯಕತ್ವ ಕೊರತೆ ಇದೆನಾ ಅಥವಾ ಕಾರ್ಯಕರ್ತರ ಕೊರತೆ ಇದೆನಾ ಎಂದು ತಿಳಿಯದಾಗಿದ್ದು, ಆದರೆ ಮುಂದಿನ ಚುನಾವಣೆಯಲ್ಲಿ ರಾಯಚೂರು ಜಿಲ್ಲೆಯ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿ ಕಮಲ ಅರಳಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿ ಕೊಂಡರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ