ಶ್ರೀಶಾರದಾಶ್ರಮದಲ್ಲಿ ಒಂದು ದಿನದ – ಆಧ್ಯಾತ್ಮಿಕ ಶಿಬಿರ.
ಚಳ್ಳಕೆರೆ ಏ.02





ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಏಪ್ರಿಲ್ 4 ರ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಶ್ರೀದೇವಿ ಸ್ತುತಿ ಪಠಣ, ವಿಶೇಷ ಭಜನೆ, ಪ್ರವಚನ ಮತ್ತು ಆಧ್ಯಾತ್ಮಿಕ ಪ್ರಶ್ನೋತ್ತರ ಹಾಗೂ ಮೌನಾಭ್ಯಾಸಗಳನ್ನು ಒಳಗೊಂಡ ಒಂದು ದಿನದ ಆಧ್ಯಾತ್ಮಿಕ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಶ್ರೀಶಾರದಾಶ್ರಮದ ಅಧ್ಯಕ್ಷರಾದ ಮಾತಾಜೀ ತ್ಯಾಗಮಯೀ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.