6 ನೇ. ತರಗತಿ ಪ್ರವೇಶಕ್ಕಾಗಿ – ಅರ್ಜಿ ಆಹ್ವಾನ.
ಹೊಸಪೇಟೆ ಏ.19

2024-25 ನೇ. ಶೈಕ್ಷಣಿಕ ಸಾಲಿನ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ 6 ನೇ. ತರಗತಿಗೆ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ರಷ್ಟು, ಎಸ್/ಸಿ-ಎಸ್/ಟಿ ಮತ್ತು ಹಿಂದುಳಿದ ವರ್ಗಗಳಿಗೆ ಶೇ.25 ರಷ್ಟು ಮೀಸಲಾತಿ ಆಧರಿಸಿ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನ https://sevasindhu.karnataka.gov.in ಮುಖಾಂತರ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಮೇ.10 ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು ಖಂಖಿಖ ಸಂಖ್ಯೆ, ಆಧಾರ್ ಸಂಖ್ಯೆ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಾಸ್ ಪೋರ್ಟ್ ಸೈಜ್ ಫೋಟೊ ಮತ್ತು ಅಂಗವಿಕಲರು ಇದ್ದಲ್ಲಿ ಅಂಗವಿಕಲ ಪ್ರಮಾಣ ಪತ್ರ ದಾಖಲೆಗಳನ್ನು ಸಲ್ಲಿಸಬೇಕು. ವಿದ್ಯಾರ್ಥಿಗಳು ಉಚಿತ ಸೇವೆಯನ್ನು ಬಳಸಲು ಮೌಲಾನಾ ಆಜಾದ್ ಮಾದರಿ ಶಾಲೆಗಳು ಹಾಗೂ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಬಹುದು ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಸಂಪರ್ಕಿಸಿರಿ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಾಲತೇಶ್.ಶೆಟ್ಟರ್.ಹೊಸಪೇಟೆ