ಮಾನ್ವಿ ಪಟ್ಟಣದ ಬಸವ ವೃತ್ತದಲ್ಲಿ ಕ್ಯಾಂಡಲ್ ಬೆಳಗುವ ಮೂಲಕ ಶ್ರದ್ಧಾಂಜಲಿ – ಸಲ್ಲಿಸಿದ ಜೆಡಿಎಸ್ ಕಾರ್ಯಕರ್ತರು.

ಮಾನ್ವಿ ಏ.28

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರವಾದಿಗಳು ಹತ್ಯೆ ಮಾಡಿರುವುದನ್ನು ಖಂಡಿಸಿ ಮಾನ್ವಿ ಪಟ್ಟಣದ ಬಸವ ವೃತ್ತದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಕ್ಯಾಂಡಲ್ ಬೆಳಗುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿ, ಕಾಶ್ಮೀರದ ಪಹಲ್ಗಾಮ್‌ನಲ್ಲಿ ಆತಂಕವಾದಿಗಳು ಸಾಮಾನ್ಯ ಜನರನ್ನು ಹತ್ಯೆ ಮಾಡಿರುವುದು ಖಂಡನೀಯ ಎಂದು ತಿಳಿಸಿದರು.

ಈ ರೀತಿಯ ಕ್ರೂರ ಕೃತ್ಯಗಳು ದೇಶದ ಶಾಂತಿ, ಸಾಮರಸ್ಯತೆಗೆ ಧಕ್ಕೆಯಾಗಿದ್ದು, ಇಂತಹ ಘಟನೆಗಳನ್ನು ತೀವ್ರವಾಗಿ ಖಂಡಿಸುತ್ತೇವೆ. ಇಂತಹ ಕೃತ್ಯಗಳು ಮಾಡೋಕೆ ಉಗ್ರವಾದಿಗಳಿಗೆ ಮನಸ್ಸಾದರು ಹೇಗೆ ಬಂತು ಎಂದು ಕಿಡಿಕಾರಿದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button