10₹ ಕೋಟಿ ವೆಚ್ಚದಲ್ಲಿ ಮಿನಿ ವಿಧಾನ ಸೌಧ – ನಿರ್ಮಾಣಕ್ಕೆ ಭೂಮಿ ಪೂಜೆ.
ಮಾನ್ವಿ ಮೇ.05

ತಾಲೂಕಿನ ವಿವಿಧ ಸರಕಾರಿ ಇಲಾಖೆಗಳ ಸೌಲಭ್ಯಗಳನ್ನು ಒಂದೇ ಸೂರಿ ನಡಿಯಲ್ಲಿ ಸಾರ್ವಜನಿಕರಿಗೆ ಸುಲಭವಾಗಿ ತಲುಪಿಸುವ ಉದ್ದೇಶದಿಂದ ಮಿನಿ ವಿಧಾನ ಸೌಧ ನಿರ್ಮಿಸಲು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಬೋಸರಾಜು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್ ಪಾಟೀಲ್ ಶನಿವಾರ ಚಾಲನೆ ನೀಡಿದರು. ಮಿನಿ ವಿಧಾನ ಸೌಧ ನಿರ್ಮಾಣದ ನಂತರ ವಿವಿಧ ಇಲಾಖೆಗಳು ಅಧಿಕಾರಿಗಳು ಒಂದೆಡೆ ಸಿಗುವುದರಿಂದ ಸಾರ್ವಜನಿಕರ ಅಲೆದಾಟ ತಪ್ಪುತ್ತದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಬೋಸರಾಜು ತಿಳಿಸಿದರು.ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜನಪರ ಯೋಜನೆಗಳ ಮೂಲಕ ಇಂತಹ ಅನೇಕ ಕಾರ್ಯಾಲಯಗಳ ನಿರ್ಮಾಣದ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇವೆ. ಮಾನ್ವಿ ವಿಧಾನ ಸಭಾ ಕ್ಷೇತ್ರದ ಶೈಕ್ಷಣಿಕ ಸಾಮಾಜಿಕ ಆರ್ಥಿಕ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಮಿನಿ ವಿಧಾನ ಸೌಧ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಗುಣಮಟ್ಟ ದೊಂದಿಗೆ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸ ಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಶಾಸಕ ಹಂಪಯ್ಯ ನಾಯಕ, ಕಾಂಗ್ರೆಸ್ ಮುಖಂಡರಾದ ಕೆ ಶಾಂತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಗಪೂರ್ ಸಾಬ್, ಬಾಲಸ್ವಾಮಿ ಕೊಡ್ಲಿ, ಶಿವರಾಜ ನಾಯಕ ವಕೀಲ, ಸುಭಾಷ್ ನಾಯಕ್, ಹನುಮೇಶ್ ಮದ್ಲಾಪುರ್, ತಿಪ್ಪಣ್ಣ ಬಾಗಲವಾಡ್, ಮಹಾಂತೇಶ್ ಸ್ವಾಮಿ ರೌಡೂರ್, ಖಾಲೀದ್ ಖಾದ್ರಿ, ಹೈಮದ್ ರಾಹುಲ್ ಸೇರಿದಂತೆ ಪುರ ಸಭೆಯ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ