ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ – ನೊಂದಣಿಗೆ ಅವಕಾಶ.
ಮಾನ್ವಿ ಮೇ.15

ಹೈದ್ರಾಬಾದ್ ಕರ್ನಾಟಕ ವಿದ್ಯಾರ್ಥಿ ಒಕ್ಕೂಟ ಹಾಗೂ ಸಮಾನ ಮನಸ್ಕಾರ ವೇದಿಕೆಯಿಂದ ಜೂನ್ 4 ರಂದು ಧ್ಯಾನ ಮಂದಿರದಲ್ಲಿ ಶೇ.90ಕ್ಕಿಂತ ಹೆಚ್ವು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಕೀಲ ದತ್ತಾತ್ರೇಯ ಕೊಟ್ನೇಕಲ್ ತಿಳಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಚಲನ ಚಿತ್ರ ನಟ ಹಾಗೂ ಪ್ರಗತಿಪರ ಚಿಂತಕ ಚೇತನ ಅಹಿಂಸ ಸೇರಿದಂತೆ ಸಚಿವರು ಶಾಸಕರು ಭಾಗವಹಿಸಲಿದ್ದಾರೆ ಎಂದರು.
ಮೇ. 30 ರೊಳಗಾಗಿ ಶೇ.90 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ತಮ್ಮ ಹೆಸರುಗಳನ್ನು ನೊಂದಾಯಿಸಿ ಕೊಳ್ಳುವುದಕ್ಕೆ ಮಲ್ಲೇಶ ಮಾಚನೂರು ವಕೀಲರು, ಹನಮಂತ ಬ್ಯಾಗವಾಟ್, ಹನುಮೇಶ ಜೀನೂರು, ದತ್ತಾತ್ರೆಯ ವಕೀಲರನ್ನು ಸಂಪರ್ಕಿಸುವಂತೆ ಕೋರಿದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ