ಜೀವಿಯಲ್ಲಿರುವ ಆತ್ಮನೂ, ಪರಮ ಸತ್ಯವಾದ ಬ್ರಹ್ಮ ಚೈತನ್ಯವೂ – ಒಂದೇ ಆಗಿರುವುದೆಂದು ಅದರ ಸಾರ.
ನರೇಗಲ್ಲ ಫೆ.15

ಅದ್ವೈತ’ವೆಂದರೆ ಎರಡಿಲ್ಲದ್ದು. ಅಂದರೆ ‘ಒಂದೇ’ ಆಗಿರುವುದು. ಜೀವಿಯಲ್ಲಿರುವ ಆತ್ಮನೂ, ಪರಮ ಸತ್ಯವಾದ ಬ್ರಹ್ಮ ಚೈತನ್ಯವೂ ಒಂದೇ ಆಗಿರುವುದೆಂದು ಅದರ ಸಾರ. ಈ ರೀತಿಯ ಭೇದವನ್ನು ತಿರಸ್ಕರಿಸಿರುವ ಕಾರಣ ಈ ಸಿದ್ಧಾಂತವನ್ನು ಅಭೇದ ಸಿದ್ಧಾಂತವೆಂದೂ ಕರೆಯಲಾಗುತ್ತದೆ. ಎಂದು ನಿವೃತ್ತ ಶಿಕ್ಷಕ ರಾಮಚಂದ್ರ ಮೋನೆ ಹೇಳಿದರು.ಪಟ್ಟಣದ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ನಡೆದಿರುವ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ಗುರುಪಾಡ್ಯಮಿ ದಿವಸ ಜಗದ್ಗುರು ಶಂಕರಾಚಾರ್ಯರ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಅದ್ವೈತ ಸಿದ್ಧಾಂತ ಜಗತ್ತಿನ ಪ್ರಾಚೀನತಮ ಅದ್ವಯ ಸಿದ್ಧಾಂತಗಳಲ್ಲಿ ಪ್ರಮುಖವಾದದ್ದು. ‘ಅದ್ವೈತ’ ಎಂದೊಡನೆ ಶ್ರೀ ಆದಿ ಶಂಕರಾಚಾರ್ಯರ ಹೆಸರು ಪ್ರಸ್ತಾಪಿಸಲ್ಪಡುತ್ತದೆ. ಅದ್ವೈತ ಸಿದ್ಧಾಂತಕ್ಕೆ ಒಂದು ತಾತ್ತ್ವಿಕ ನೆಲೆಗಟ್ಟನ್ನು ಒದಗಿಸಿ ಕೊಟ್ಟು, ಅದನ್ನು ದರ್ಶನದ ಮಟ್ಟಕ್ಕೆ ಕೊಂಡೊಯ್ದು ಪ್ರಚಾರ ಪಡಿಸಿದವರು ಆದಿ ಶಂಕರರು. ಹಾಗೆಂದು ಶಂಕರರ ಮೊದಲು ಅದ್ವೈತ ಸಿದ್ಧಾಂತವಿರಲಿಲ್ಲ ವೆಂದಲ್ಲ. ಶಂಕರರು ಗೌಡಪಾದರ ಪರಂಪರೆಗೆ ಸೇರಿದ ಗೋವಿಂದ ಭಗವತ್ಪಾದರ ಶಿಷ್ಯರು. ಹಾಗಾಗಿ ಶಂಕರರಿಗಿಂತಲೂ ಮೊದಲು ಅದ್ವೈತ ಸಿದ್ಧಾಂತವು ಉದಯಿಸಿತ್ತೆಂದೂ, ಈ ಪರಂಪರೆಯಲ್ಲಿ ಅನೇಕ ಆಚಾರ್ಯರುಗಳು ಆಗಿ ಹೋಗಿದ್ದರೆಂದೂ ಹೇಳ ಬಹುದಾಗಿದೆ. ‘ಅದ್ವೈತ’ವೆಂದರೆ ಎರಡಿಲ್ಲದ್ದು. ಅಂದರೆ ‘ಒಂದೇ’ ಆಗಿರುವುದು. ಜೀವಿಯಲ್ಲಿರುವ ಆತ್ಮನೂ, ಪರಮ ಸತ್ಯವಾದ ಬ್ರಹ್ಮ ಚೈತನ್ಯವೂ ಒಂದೇ ಆಗಿರುವುದೆಂದು ಅದರ ಸಾರ. ಈ ರೀತಿಯ ಭೇದವನ್ನು ತಿರಸ್ಕರಿಸಿರುವ ಕಾರಣ ಈ ಸಿದ್ಧಾಂತವನ್ನು ಅಭೇದ ಸಿದ್ಧಾಂತವೆಂದೂ ಕರೆಯಲಾಗುತ್ತದೆ. ಡಾ, ಜಿ.ಕೆ ಕಾಳೆ ಮಾತನಾಡಿದರು. ಅಧ್ಯಕ್ಷ ಡಾ, ನಾಗರಾಜ ಗ್ರಾಮ ಪುರೋಹಿತ ಅಧ್ಯಕ್ಷತೆ ವಹಿಸಿದ್ದರು. ಅರುಣ ಕುಲಕರ್ಣಿ ನಿರೂಪಿಸಿದರು. ಸುನೀಲ ಅಂಬೇಕರ ಸ್ವಾಗತಿಸಿದರು. ರಘುನಾಥ ಕೊಂಡಿ ವಂದಿಸಿದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ. ರೋಣ.ಗದಗ