ನೆಲ್ಲಿಬೆಟ್ಟು ಗಣೇಶೋತ್ಸವದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಭಾಗಿ – ಸೌಹಾರ್ದತೆಗೆ ಆದ್ಯತೆ.
ಉಡುಪಿ ಸ.03

ಮಾಜಿ ಶಾಸಕರು, ಮೀನುಗಾರಿಕಾ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಮಾಜಿ ಸಚಿವರು ಹಾಗೂ ಮಾಜಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ದಿನಾಂಕ 27/08/2025 ರಂದು ನೆಲ್ಲಿಬೆಟ್ಟು ಗಣೇಶೋತ್ಸವದಲ್ಲಿ ಪಾಲ್ಗೊಂಡರು. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಾರ್ವಜನಿಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವರ ನಡೆ, ಸೌಹಾರ್ದಯುತ ಸಮಾಜದ ನಿರ್ಮಾಣಕ್ಕೆ ಉತ್ತಮ ನಿದರ್ಶನವಾಗಿದೆ.
ಪ್ರಮೋದ್ ಮಧ್ವರಾಜ್ ಅವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಜಾತಿ, ಧರ್ಮಗಳ ಬೇಧವಿಲ್ಲದೆ ಎಲ್ಲಾ ವರ್ಗದ ಜನರೊಂದಿಗೆ ಬೆರೆತವರು. ಸಚಿವ ಮತ್ತು ಶಾಸಕರಾಗಿ ಅವರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನೀಡಿದ ಕೊಡುಗೆ ಸ್ಮರಣೀಯ. ಅವರ ಈ ಸಾರ್ವಜನಿಕ ನಡೆ, ಜನ ಪ್ರತಿನಿಧಿಗಳು ಕೇವಲ ಅಧಿಕಾರಕ್ಕೆ ಸೀಮಿತರಾಗದೆ, ಜನರ ಜೊತೆ ನಿಂತು ಅವರ ಸಂಭ್ರಮದಲ್ಲಿ ಭಾಗಿಯಾಗಬೇಕು ಎಂಬುದನ್ನು ತೋರಿಸುತ್ತದೆ.
ನೆಲ್ಲಿಬೆಟ್ಟು ಗಣೇಶೋತ್ಸವದಂತಹ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ರಾಜಕೀಯ ನಾಯಕರು ಪಾಲ್ಗೊಳ್ಳುವುದು, ಸಮುದಾಯಗಳ ನಡುವೆ ನಂಬಿಕೆ ಮತ್ತು ಸೌಹಾರ್ದವನ್ನು ಬಲ ಪಡಿಸುತ್ತದೆ. ಪ್ರಮೋದ್ ಮಧ್ವರಾಜ್ ಅವರ ಉಪಸ್ಥಿತಿಯು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು ಮತ್ತು ಅವರ ಸರಳತೆ ಹಾಗೂ ಜನಸ್ನೇಹಿ ಗುಣಕ್ಕೆ ಸ್ಥಳೀಯರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ ಎಂದು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್ ನ ಅಭಿಪ್ರಾಯ ಆಗಿದೆ.
ವರದಿ:ಆರತಿ.ಗಿಳಿಯಾರು.ಉಡುಪಿ