ಪೀಲಯ್ಯನಹಟ್ಟಿ ಸರ್ಕಾರಿ ಶಾಲೆಯ 6 ವಿದ್ಯಾರ್ಥಿಗಳು ಮುರಾರ್ಜಿ ದೇಸಾಯಿ – ವಸತಿ ಶಾಲೆಗಳಿಗೆ ಆಯ್ಕೆ.

ಪೀಲಯ್ಯಲಹಟ್ಟಿ ಜೂ.12

2025-26 ನೇ. ಸಾಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪೀಲಯ್ಯನಹಟ್ಟಿ ತಾಲೂಕು ಚಳ್ಳಕೆರೆ ಸದರಿ ಶಾಲೆಯ 06 ಜನ ವಿದ್ಯಾರ್ಥಿಗಳು ಈ ವರ್ಷದ ಪ್ರವೇಶ ಪರೀಕ್ಷೆಯನ್ನು ಬರೆದು 06 ಮಕ್ಕಳು ವಿವಿಧ ವಸತಿ ಶಾಲೆಗಳಿಗೆ ಆಯ್ಕೆ ಯಾಗಿರುವುದು ತುಂಬಾ ಸಂತೋಷಕರ ವಿಷಯವಾಗಿದೆ.2024-25 ನೇ. ಸಾಲಿನಲ್ಲಿ 5 ತರಗತಿಯಲ್ಲಿ 06 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು 5 ನೇ. ತರಗತಿ ಮುಗಿದ ನಂತರ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸುಮಾರು 1 ರಿಂದ 2 ಕಿ.ಮೀ ದೂರದ ಶಾಲೆಗಳಿಗೆ ಹೋಗಬೇಕಾದ ಪರಿಸ್ಥಿತಿಯನ್ನು ಅರಿತು ಪಾಲಕರು ಹಾಗೂ ವಿದ್ಯಾರ್ಥಿಗಳ ಇಚ್ಛೆಯ ಮೇರೆಗೆ ಸದರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇಬ್ಬರು ಶಿಕ್ಷಕರ ಪ್ರಯತ್ನದ ಫಲವಾಗಿ ಮಕ್ಕಳು ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದು 06 ಮಕ್ಕಳು ವಿವಿಧ ವಸತಿ ಶಾಲೆಗಳಿಗೆ ಆಯ್ಕೆ ಯಾಗಿರುವುದು ಶಿಕ್ಷಕರಲ್ಲಿ ವಿದ್ಯಾರ್ಥಿಗಳಲ್ಲಿ ಪಾಲಕರಲ್ಲಿ ಹಾಗೂ SDMC ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರಲ್ಲಿ ಸಂತೋಷವನ್ನುಂಟು ಮಾಡಿದೆ.ಮಕ್ಕಳ ಈ ಸಾಧನೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ರೀತಿಯಲ್ಲಿ ಶಿಕ್ಷಣ ಪಡೆದು ಶಾಲೆಗೆ ಗ್ರಾಮಕ್ಕೆ ಹಾಗೂ ತಂದೆ ತಾಯಿಗಳಿಗೆ ಉತ್ತಮ ಹೆಸರನ್ನು ತರಲಿ ಹಾಗೂ ಉನ್ನತ ಮಟ್ಟದ ಶಿಕ್ಷಣ ಪಡೆದು ಇಡೀ ರಾಜ್ಯಕ್ಕೆ ಮಾದರಿಯಾಗಲಿ ಎಂಬುದು ಸರ್ವರ ಹಾರೈಕೆ ಯಾಗಿದೆ ಅಲ್ಲದೆ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎಸ್ ಸುರೇಶ್ ಕುಮಾರ್ ರವರು ಮಕ್ಕಳ ಸಾಧನೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಮಕ್ಕಳನ್ನು ವ್ಯವಸ್ಥಿತ ರೀತಿಯಲ್ಲಿ ಉತ್ತಮ ಶಿಕ್ಷಣ ನೀಡಿ ಆಯ್ಕೆಯಾಗಲು ಶ್ರಮಿಸಿದ ಶಾಲೆಯ ಶಿಕ್ಷಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಟಿ. ಶಿವಮೂರ್ತಿ.ಕೋಡಿಹಳ್ಳಿ.ಚಿತ್ರದುರ್ಗ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button