ಗ್ರೀನವುಡ್ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿನಿ – ಕರಾಟೆ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ.
ರೋಣ ನ.30

ಪಟ್ಟಣದ ಶ್ರೀ ಸಿದ್ರಾಮೇಶ್ವರ ವಿದ್ಯಾವರ್ಧಕ್ ಸಂಸ್ಥೆಯ ಅಂಗ ಸಂಸ್ಥೆಯಾದ ಗ್ರೀನವುಡ್ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ 6 ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಸೌಮ್ಯ ಕಮ್ಮಾರ ನವೆಂಬರ್ 29 ಶುಕ್ರವಾರ ದಂದು ಬೆಂಗಳೂರುನಲ್ಲಿ ಸ್ಕೂಲ್ ಗೇಮ್ಸ್ ಫೆಡರೇಷನ್ ಆಪ್ ಇಂಡಿಯಾ ವತಿಯಿಂದ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ಸಾಧನೆ ಮಾಡಿದ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಅವಿನಾಶ ಸಾಲಿಮನಿ ಆಡಳಿತಧಿಕಾರಿಗಳಾದ ಶ್ರೀ ಎಸ್ ಎಮ್ ಮುಖ್ಯೋಪಾಧ್ಯರಾದ ಶ್ರೀಮತಿ ಸುನೀತಾ ರಾಭ ಶ್ರೀ ಕರಾಟೆ ತರಬೇತಿದಾರರಾದ ಶ್ರೀ ಚೇತನ್ ಹಬೀಬಿ ಹಾಗೂ ಶಾಲೆಯ ಸಿಬ್ಬಂದಿ ಹಾಗೂ ಶಾಲಾ ವಾಹನ ಚಾಲಕರ ವೃಂದದವರು ಅಭಿನಂದನೆ ತಿಳಿಸಿ ಶುಭ ಹಾರೈಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್. ವಿ ಸಂಕನಗೌಡ್ರ ರೋಣ