ಕಾಲುವೆಹಳ್ಳಿಯ ಶತಾಯುಷಿ ಸೂಲಗಿತ್ತಿ – ತಳುಕಿನ ತಿಮ್ಮಕ್ಕಗೆ ಸನ್ಮಾನ.
ಚಳ್ಳಕೆರೆ ಜೂ.19

ನರಹರಿ ನಗರದ ಶ್ರೀನರಹರಿ ಸೇವಾ ಪ್ರತಿಷ್ಠಾನ ಹಾಗೂ ನಾಗ ಸಿಂಹಾದ್ರಿ ಚಾರಿಟೀಸ್ ನ ವತಿಯಿಂದ ಜೂನ್ 22 ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ನರಹರಿ ನಗರದ ಶ್ರೀನರಹರೇಶ್ವರ ದೇವಸ್ಥಾನದ ಆವರಣದಲ್ಲಿ ಕಾಲುವೆಹಳ್ಳಿಯ ಶತಾಯುಷಿ ಸೂಲಗಿತ್ತಿ ತಳುಕಿನ ತಿಮ್ಮಕ್ಕರ ಸೇವೆಗೆ ಸನ್ಮಾನ ಹಾಗೂ 2024-2025 ನೇ. ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇಕಡ 95 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ನೀಡಲಾಗುತ್ತಿದ್ದು ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಎನ್.ಸುಧಾಕರ್ ಮತ್ತು ಜಿ.ಜೆ ಸತ್ಯನಾರಾಯಣ, ಏಕಾಂತರಾಮ್.ಬಿ ಸಿ ಸಂಜೀವಮೂರ್ತಿ ಪಾಲ್ಗೊಳ್ಳಲಿದ್ದಾರೆ ಎಂದು ಶ್ರೀನರಹರಿ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಪೂಜ್ಯ ವೈ ರಾಜಾರಾಮ್ ಗುರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ:ಯತೀಶ್.ಎಂ ಸಿದ್ದಾಪುರ, ಚಳ್ಳಕೆರೆ.