ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ – ಬಸವ ಬಾಲ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜರುಗುವುದು.
ಢವಳಗಿ ಜೂ.20

ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತವಾಗಿ ಢವಳಗಿ ಗ್ರಾಮದ ಬಸವ ಬಾಲ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇಂದು ಬೆಳಗಿನ ಜಾವ 6 ಗಂಟೆಯಿಂದ 7ರ ವರೆಗೆ ಯೋಗ ಶಿಬಿರವನ್ನು ವಿಜಯವಾಣಿ ಮಾಧ್ಯಮ ಸಹಯೋಗ ದೊಂದಿಗೆ ಹಮ್ಮಿಕೊಳ್ಳಲಾಗಿದೆ. ಯೋಗ ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಮತ್ತು ಮಕ್ಕಳು ಭಾಗವಹಿಸುವರು ಎಂದು ಶಾಲೆಯ ಮುಖ್ಯ ಗುರುಗಳಾದ ರಮೇಶ ಮೂಲಿಮನಿ ಯವರು ತಿಳಿಸಿದ್ದಾರೆ ಎಂದು ವರದಿಯಾಗಿದೆ.