ಆರೋಗ್ಯ ಸದೃಢವಾಗಿರಲು ಯೋಗ – ಅಭ್ಯಾಸ ಮುಖ್ಯ.

ಮಾನ್ವಿ ಜೂ.22

ನಮ್ಮ ಆರೋಗ್ಯ ಸದೃಢವಾಗಿರಲು ಯೋಗ ಅಭ್ಯಾಸವನ್ನು ಪ್ರತಿಯೊಬ್ಬರು ಮಾಡಬೇಕು ಎಂದು ಮಿಲ್ಟನ್ ಶಾಲೆಯ ಸಂಸ್ಥಾಪಕ ಡಿ.ಪ್ರಕಾಶ್ ತಿಳಿಸಿದರು.

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಮಿಲ್ಟನ್ ಶಾಲೆಯ ಆವರಣದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,‌ ಯೋಗ ಗುರು ಬಸವರಾಜ ಚಲ್ಮಾಲ್ ಅವರು ಕಳೆದ ನಾಲ್ಕು ವರ್ಷದಿಂದ ಉಚಿತವಾಗಿ ನಿತ್ಯ ಬೆಳಿಗ್ಗೆ 5 ಗಂಟೆಗೆ ಯೋಗ ಅಭ್ಯಾಸದ ತರಬೇತಿ ನೀಡುತ್ತಿದ್ದಾರೆ. ಹೀಗಾಗಿ ಪ್ರತಿಯೊಬ್ಬರು ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಸಲಹೆ ನೀಡಿದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ ಎಂದರೆ ಪ್ರತಿಯೊಬ್ಬರು ಆರೋಗ್ಯವಾಗಿ ಇರಲು ಯೋಗ ಸಹಕಾರಿ ಎಂದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button