ಸಭೆಗೆ ಪತ್ರಕರ್ತರಿಗೆ ಆಹ್ವಾನ ನೀಡದೆ, ಪತ್ರಿಕಾ ಮಾಧ್ಯಮ ಮಿತ್ರರಿಗೆ ಮಾಡಿದ ಅವಮಾನ – ಮಲ್ಲಿಕಾರ್ಜುನಗೌಡ ಭೂಮನಗೌಡ್ರ.
ನರೇಗಲ್ಲ ಜು.05

ಸ್ಥಳೀಯ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಕಡತಗಳ ವಿಚಾರದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು ಕೋಟ್ಯಂತರ ಹಣ ಪೋಲಾಗುತ್ತಿದೆ ಎಂದು ಸಾರ್ವಜನಿಕರು ಹಾಗೂ ವಿಪಕ್ಷಗಳು ಆರೋಪ ಮಾಡುತ್ತಿದ್ದಾರೆ.
ಇದಕ್ಕೆ ಪುಷ್ಟಿ ನೀಡುವಂತೆ ಪಟ್ಟಣ ಪಂಚಾಯಿತಿಯಲ್ಲಿ ಅಧ್ಯಕ್ಷ ಫಕೀರಪ್ಪ ಮಳ್ಳಿಯವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಗೆ ಮಾಧ್ಯಮ ದವರನ್ನು ಆಹ್ವಾನಿಸದೇ ದೂರವಿಟ್ಟು ಸಭೆ ನಡೆಸಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿದೆ. ಸಭೆಯಲ್ಲಿ ನಡೆಯುವ ವಿಷಯಗಳು ಜನತೆಗೆ ತಲುಪ ಬಾರದು ಎಂಬ ಧೋರಣೆ ಆಡಳಿತದ್ದಾಗಿದೆ. ಆಡಳಿತ ಯಂತ್ರದಲ್ಲಿ ಪಾರದರ್ಶಕತೆ ಇಲ್ಲವಾಗಿದೆ. ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳದೇ ತಮ್ಮಿಷ್ಟದಂತೆ ಆಡಳಿತ ನಡೆಸುತ್ತಿರುವುದು.ಪಟ್ಟಣ ಪಂಚಾಯಿತಿ ಸಭೆ, ಸಮಾರಂಭಗಳಿಗೆ ಪತ್ರಕರ್ತರನ್ನು ಕರೆಸಿ ತಾವು ಕೈಗೊಂಡ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ನಡೆಸುವುದು, ಕಾರ್ಯಗಳನ್ನು ಜನರಿಗೆ ತಿಳಿಸುವುದು ನಡೆದು ಬಂದಿರುವ ಪರಂಪರೆ. ಈಗಿನ ಆಡಳಿತ ಇದನ್ನು ಮುರಿದಿದೆ. ಪಟ್ಟಣದಲ್ಲಿ ಜನರಿಂದ ಸಂಗ್ರಹ ಮಾಡಿದ ತೆರಿಗೆ ಹಣವನ್ನು ಸ್ಥಳೀಯ ಆಡಳಿತದ ನಿರ್ಲಕ್ಷ್ಯತನ ದಿಂದ ಪೋಲಾಗುತ್ತಿದೆ. ಇವರಿಗೆ ಅಭಿವೃದ್ಧಿ ಬೇಕಾಗಿಲ್ಲ. ಹೀಗಾಗಿ ಸಭೆಯಲ್ಲಿ ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳದೆ ಜತೆಗೆ ಪತ್ರಕರ್ತರನ್ನು ದೂರವಿಟ್ಟು ಸಭೆ ಮಾಡಿದ್ದಾರೆ ಎಂದು ವಿರೋಧ ಪಕ್ಷದ ಸದಸ್ಯ ಮಲ್ಲಿಕಾರ್ಜುನಗೌಡ ಭೂಮಗೌಡ್ರ ದೂರಿದರು.
ಸಾಮಾನ್ಯ ಸಭೆಯ ಮೊದಲು ಪೂರ್ವಬಾವಿ ಸಭೆ ಕರೆಯುವಂತೆಯು ಅನೇಕ ಬಾರಿ ತಿಳಿಸಿರುವೆ. ಅದನ್ನು ಪರಿಗಣಿಸಿಲ್ಲಾ. ನಾನು ಪ್ರಶ್ನೆ ಮಾಡುತ್ತೇನೆ ಎನ್ನುವ ಕಾರಣಕ್ಕೆ ಈ ಬಾರಿ ನಮ್ಮನ್ನು ಸಹ ಕಡೆಗಣಿಸಲಾಗಿದೆ. ಪ್ರತಿ ಬಾರಿಯಂತೆ ಮಾಹಿತಿ ತಿಳಿಸದೇ ಲಕೋಟೆ ಕಳುಹಿಸಿ ಸಭೆ ಇದೆ ಎಂದು ಹೇಳಿದ್ದಾರೆ. ಹಿಂದಿನ ಸಾಮಾನ್ಯ ಸಭೆಯಲ್ಲಿ ಮಂಡನೆಯಾದ ಕೆಲ ವಿಷಯಗಳು ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದವು. ಕೆಲ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರ ನೀಡಿರಲಿಲ್ಲ. ಆದಕಾರಣ ದೂರವಿಟ್ಟು ಸಭೆ ಮಾಡಿದ್ದಾರೆ’ಎಂದು ವಿರೋಧ ಪಕ್ಷದ ಸದಸ್ಯೆ ಜ್ಯೋತಿ ಪಾಯಪ್ಪಗೌಡ್ರ ಆರೋಪಿಸಿದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ. ರೋಣ.ಗದಗ