ಡಾ, ಬಾಬು ಜಗಜೀವನ್ ರಾಮ್ ಪುಣ್ಯ ಸ್ಮರಣೋತ್ಸವ -ಸಚಿವ ಎನ್.ಎಸ್ ಬೋಸರಾಜು ಅವರಿಂದ ಮಾಲಾರ್ಪಣೆ.
ಮಾನ್ವಿ ಜು.06

ಹಸಿರು ಕ್ರಾಂತಿಯ ಹರಿಕಾರರು ನಿರಂತರವಾಗಿ ಶೋಷಿತ ಸಮುದಾಯಗಳ ಹಾಗೂ ದುರ್ಬಲರ ಕಲ್ಯಾಣಕ್ಕಾಗಿ ಶ್ರಮಿಸಿದ ನಾಡು ಕಂಡ ಮಾಜಿ ಉಪ ಪ್ರಧಾನಿ ಡಾ, ಬಾಬು ಜಗಜೀವನ್ ರಾಮ್ ಅವರ ಪುಣ್ಯ ಸ್ಮರಣೆಯ ನಿಮಿತ್ಯ ರಾಯಚೂರಿನ ರೈಲ್ವೆ ನಿಲ್ದಾಣದ ವೃತ್ತದಲ್ಲಿರುವ ಡಾಕ್ಟರ್, ಬಾಬು ಜೀವನ್ ರಾಮ್ ಅವರ ಪುತ್ತಳಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್.ಎಸ್ ಬೋಸರಾಜು ಹಾಗೂ ಜಿಲ್ಲಾಧಿಕಾರಿಗಳಾದ ನಿತೀಶ್.ಕೆ ಅವರು ಮಾಲಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಮಹಾ ನಗರ ಪಾಲಿಕೆಯ ಆಯುಕ್ತರಾದ ಜುಬೇನ್ ಮಹಾಪತ್ರ, ಕಾಂಗ್ರೆಸ್ ಮುಖಂಡರಾದ ಜಯಣ್ಣ, ಬಿ.ರಮೇಶ್, ಅಮರೇಗೌಡ ಹಂಚಿನಾಳ, ಜಿ.ಶಿವಮೂರ್ತಿ, ರಾಜು.ಪಟ್ಟಿ, ಮರಿಸ್ವಾಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ