ಕಂದಾಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮ – ಉದ್ಘಾಟಿಸಿದ ಸಚಿವ ಬೋಸರಾಜು.
ಮಾನ್ವಿ ಜು.07

ಪಟ್ಟಣದ ತಹಸೀಲ್ದಾರ್ ಕಚೇರಿಯ ಆವರಣದಲ್ಲಿ ನಡೆದ ಕಂದಾಯ ದಿನಾಚರಣೆ ಕಾರ್ಯಕ್ರಮವನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಹಾಗೂ ಶಾಸಕ ಹಂಪಯ್ಯ ನಾಯಕ ಉದ್ಘಾಟಿಸಿದರು.
ನಂತರ ಸಚಿವ ಎನ್.ಎಸ್ ಬೋಸರಾಜು ಮಾತನಾಡಿ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿನ ಆಡಳಿತದಲ್ಲಿ ಸಾಕಷ್ಟು ಸುಧಾರಣೆಗಳನ್ನು ತಂದಿದ್ದೇವೆ.
ಕಂದಾಯ ಇಲಾಖೆ ಸಾರ್ವಜನಿಕರ ಜೀವನದಲ್ಲಿ ಮಹತ್ತರವಾದ ಪಾತ್ರ ವಹಿಸುತ್ತದೆ, ಮನುಷ್ಯ ಹುಟ್ಟಿನಿಂದ ಮರಣದ ವರೆಗಿನ ದಾಖಲೆಗಳು ಕಂದಾಯ ಇಲಾಖೆ ಯಿಂದ ಪಡೆಯ ಬೇಕಾಗುತ್ತದೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರಮಾಣಿಕವಾಗಿ ಕೆಲಸ ಮಾಡಬೇಕು ಎಂದರು.
ರಾಜ್ಯ ಸರ್ಕಾರವು ವಿವಿಧ ಫಲಾನುಭವಿಗಳಿಗೆ 1 ಲಕ್ಷ 11 ಸಾವಿರ ಹಕ್ಕು ಪತ್ರಗಳನ್ನು ವಿತರಿಸುವ ಕಾರ್ಯಕ್ರಮ ಸರ್ಕಾರ ದಿಂದ ನಡೆದಿದೆ. ಸಮಾಜದಲ್ಲಿನ ಸಮಸ್ಯೆಗಳನ್ನು ನಿವಾರಣೆಗೆ ಇ-ಖಾತೆ ಯೋಜನೆಯನ್ನು ಜಾರಿಗೆ ತರುವ ಮೂಲಕ ಜನರಿಗೆ ಅಗತ್ಯವಿರುವ ದಾಖಲೆಗಳನ್ನು ನೀಡುವುದಕ್ಕೆ ಕಂದಾಯ ಇಲಾಖೆಯ ಸಿಬ್ಬಂದಿಗಳಿಗೆ ಲ್ಯಾಪ್ ಟಾಪ್ ಸೇರಿದಂತೆ ಅಗತ್ಯ ತರಬೇತಿ ನೀಡುವುದು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡಲಾಗಿದೆ ಎಂದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ