ಶಿಕ್ಷಕ ಸಂತೋಷಗೆ ಬಸವ ಚೇತನ – ಪ್ರಶಸ್ತಿ ಪ್ರಧಾನ.
ವಿಜಯಪುರ ಜು.07

ರವಿವಾರ ಜುಲೈ 6 ರಂದು ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಅಮ್ಮ ಫೌಂಡೇಶನ್ ವತಿಯಿಂದ ಜರುಗಿದ ರಾಜ್ಯ ಮಟ್ಟದ ಬಸವ ಸಂಸ್ಕೃತಿ ಉತ್ಸವ ಸಮಾರಂಭದಲ್ಲಿ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಬಂಡೆ ಅವರಿಗೆ “ರಾಜ್ಯ ಮಟ್ಟದ ಬಸವ ಚೇತನ ಪ್ರಶಸ್ತಿ” ಯನ್ನು ಪ್ರಧಾನ ಮಾಡಲಾಯಿತು.ಈ ಸಂದರ್ಭದಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಆಲಮೇಲ ವಿರಕ್ತ ಮಠದ ಜಗದೇವ ಮಲ್ಲಿ ಬೊಮ್ಮ ಸ್ವಾಮೀಜಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ, ಮಲ್ಲಿಕಾ ಘಂಟಿ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ವಿಜಯಾ ಕೋರಿಶೆಟ್ಟಿ, ಧಾರವಾಡ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ, ಪ್ರಭುಗೌಡ ಲಿಂಗದಳ್ಳಿ, ಎಸ್ ಎಂ ಪಾಟೀಲ ಗಣಿಹಾರ, ಎ.ಎಂ ತಾಂಬೋಳಿ, ಅಮ್ಮ ಫೌಂಡೇಶನ್ ಸಂಚಾಲಕ ಕಬೂಲ ಕೊಕಟನೂರ ಸೇರಿದಂತೆ ಅನೇಕ ಗಣ್ಯರು ಪ್ರಶಸ್ತಿ ವಿತರಿಸಿದರು ಎಂದು ವರದಿಯಾಗಿದೆ.