ವಿಶ್ವ ಜನಸಂಖ್ಯಾ ದಿನ ಸಮತೋಲಿತ ಜನಸಂಖ್ಯೆ ಸಮೃದ್ಧ ಸಮಾಜಕ್ಕೆ ಅಡಿಪಾಯ – ಸಂತೋಷ ಬಂಡೆ.
ಹಿರೇರೂಗಿ ಜು.11

ಸಮತೋಲಿತ ಜನಸಂಖ್ಯೆಯು ಸಮೃದ್ಧ ಸಮಾಜ, ಸುಸ್ಥಿರ ಅಭಿವೃದ್ಧಿಯ ಬಲವಾದ ಅಡಿಪಾಯವಾಗಿದೆ. ಜನಸಂಖ್ಯಾ ನಿಯಂತ್ರಣವು ಇಂದಿನ ಅಗತ್ಯ ಅಷ್ಟೇ ಅಲ್ಲದೆ, ರಾಷ್ಟ್ರ ನಿರ್ಮಾಣಕ್ಕೆ ಅಗತ್ಯ ನೀತಿಯಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು. ಶುಕ್ರವಾರ ದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ಜನಸಂಖ್ಯಾ ದಿನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಜನಸಂಖ್ಯೆ ಹೆಚ್ಚಳದಿಂದ ಆರ್ಥಿಕ ಪ್ರಗತಿ ಕುಂಠಿತವಾಗಿ,ನೆಲ, ಜಲ, ವಾಯು ಮಾಲಿನ್ಯಕ್ಕೆ ಕಾರಣವಾಗುತ್ತದೆ. ಜೊತೆಗೆ ಭೂಮಿಯ ಉಷ್ಣಾಂಶ ಏರುತ್ತದೆ. ಆಹಾರ, ಬಟ್ಟೆ, ಶಿಕ್ಷಣ, ಆರೋಗ್ಯ ಎಲ್ಲವನ್ನೂ ನಿಭಾಯಿಸುವುದು ಅತ್ಯಂತ ಕಠಿಣ ಸವಾಲಾಗುತ್ತದೆ.

ಸಾರ್ವಜನಿಕ ಜಾಗೃತಿ ಮೂಡಿಸಿ,ಜನಸಂಖ್ಯೆ ನಿಯಂತ್ರಿಸ ಬೇಕಾಗಿದೆ ಎಂದು ಹೇಳಿದರು.ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಅಧ್ಯಕ್ಷತೆ ವಹಿಸಿ ಮಾತನಾಡಿ, ಶರ ವೇಗದಿಂದ ಬೆಳೆಯುತ್ತಿರುವ ಜನಸಂಖ್ಯೆ ಅಪಾಯದ ಸಂಕೇತ ಹಾಗೂ ಅಭಿವೃದ್ಧಿಗೆ ಮಾರಕವಾಗಿದ್ದು, ಜನಸಂಖ್ಯೆ ನಿಯಂತ್ರಣಕ್ಕೆ ಪ್ರಯತ್ನಿಸುವದು ಅತ್ಯವಶ್ಯಕ. ಜನಸಂಖ್ಯೆ ನಿಯಂತ್ರಿಸುವಲ್ಲಿ ಎಲ್ಲರ ಹೊಣೆಗಾರಿಕೆ ಅರಿಯ ಬೇಕಾಗಿದೆ ಎಂದು ಹೇಳಿದರು. ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ,ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ ಹಾಗೂ ಮಕ್ಕಳು ಭಾಗವಹಿಸಿದ್ದರು.