ವಿವಿಧ ಇಲಾಖೆಗಳ ಹಲವು ಯೋಜನೆ ಕಾಮಗಾರಿಗಳ – ಲೋಕಾರ್ಪಣೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದ ಸಿ.ಎಂ ಸಿದ್ದರಾಮಯ್ಯ.
ಇಂಡಿ ಜು.14

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಇಂಡಿ ವಿಧಾನ ಸಭಾ ಕ್ಷೇತ್ರದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ಹಲವು ಯೋಜನೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕು ಸ್ಥಾಪನೆಯನ್ನು ಸಿ.ಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೆರವೇರಿಸಿದರು.

ಸಚಿವರಾದ ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ದಿನೇಶ್ ಗುಂಡೂರಾವ್, ಶರಣ ಪ್ರಕಾಶ್ ಪಾಟೀಲ್, ಹೆಚ್.ಸಿ. ಮಹದೇವಪ್ಪ, ಹೆಚ್.ಕೆ ಪಾಟೀಲ್, ಶರಣಬಸಪ್ಪ ದರ್ಶನಾಪುರ್, ಶಾಸಕ ಯಶವಂತಗೌಡ ಪಾಟೀಲ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.