ಡಿ.ದೇವರಾಜ ಅರಸು ರವರು ಸಾಮಾಜಿಕ ಕಳಕಳಿಯ ಬದ್ಧತೆ ಇದ್ದಂತವರು – ಮುಖ್ಯಮಂತ್ರಿ ಸಿದ್ದರಾಮಯ್ಯ.
ಬೆಂಗಳೂರು ಆ.20

ಉಳ್ಳುವವನೇ ಭೂಮಿಯ ಒಡೆಯ ಕಾಯ್ದೆಯನ್ನು ಜಾರಿಗೆ ತಂದವರು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರವರು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಹೇಳಿದರು. ಅವರು ಇಂದು ವಿಧಾನ ಸೌಧದ ಬ್ಯಾಂಕಟ್ ಹಾಲ್ ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಏರ್ಪಡಿಸಿದ್ದ, ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಹಾಗೂ ಡಿ ದೇವರಾಜ ಅರಸು ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಅರಸು ರವರು ಪ್ರಗತಿಪರ ಸಾಧನಗಳ ಸರದಾರರಾಗಿದ್ದಾರೆ, ಸಾಮಾಜಿಕ ಪರಿವರ್ತನೆಯ ಹರಿಕಾರರು ಆಗಿದ್ದಾರೆ, ಡಾ, ಎಲ್.ಜಿ ಹಾವನೂರ್ ವರದಿಯಂತೆ ಮೀಸಲಾತಿಯನ್ನು ಜಾರಿಗೆ ತಂದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು 1959 ನವೆಂಬರ್ 24 ರಂದು ಸಂವಿಧಾನ ಬದ್ಧವಾಗಿ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದರು ಮೂಲಭೂತ ಹಕ್ಕುಗಳನ್ನು ಜಾರಿಗೆ ತಂದರು. ಬಸವಣ್ಣ ರವರು ಜಾತಿ ಪದ್ಧತಿ ವಿರುದ್ಧ ಹೋರಾಟ ಮಾಡಿದ್ದಾರೆ. ಅವರ ನಂತರ ಅರಸು ರವರು ಸಾಮಾಜಿಕ ಕಳಕಳಿ ಬದ್ಧತೆ ಯೊಂದಿಗೆ ಸರ್ಕಾರವನ್ನು ನಡೆಸಿದ್ದಾರೆ ಎಂದು ಹೇಳಿದರು.

ವೇದಿಕೆಯಲ್ಲಿ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್.ಎಸ್ ತಂಗಡಗಿ, ಸಭಾಧ್ಯಕ್ಷ ಯು.ಟಿ ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವರುಗಳಾದ ರಾಮಲಿಂಗ ರೆಡ್ಡಿ, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್, ಕೆ.ಜೆ ಜಾರ್ಜ್, ಕೃಷ್ಣಬೈರೇಗೌಡ, ಬೈರತಿ ಸುರೇಶ್ ಹಾಗೂ ವಿರೋಧ ಪಕ್ಷದ ನಾಯಕರು ಉಪಸ್ಥಿತರಿದ್ದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿ ನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅಹಮದ್ ರವರು ವಹಿಸಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್. ವೆಂಕಟೇಶ್.ತರೀಕೆರೆ.ಚಿಕ್ಕಮಗಳೂರು