ಬಡ ಜನರ ಹಸಿವು ತಣಿಸಲಿದೆ ಇಂದಿರಾ ಕ್ಯಾಂಟೀನ್ – ಸಚಿವ ದರ್ಶನಾಪುರ.
ಕೆಂಭಾವಿ ಜು.18

ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ರೂ 48 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಶುಕ್ರವಾರ ಸಚಿವ ಶರಣಬಸಪ್ಪ ದರ್ಶನಾಪುರ ಉದ್ಘಾಟಿಸಿ ಮಾತನಾಡಿದರೆ ಅವರು ಬಹು ನಿರೀಕ್ಷಿತ ಇಂದಿರಾ ಕ್ಯಾಂಟೀನ್ ‘ಹಸಿದ ಹೊಟ್ಟೆಗೆ ಊಟ ನೀಡುವ ವ್ಯವಸ್ಥೆ ಇದಾಗಿದೆ. ಗುಣಮಟ್ಟದ ಆಹಾರ ನೀಡುವುದರ ಜತೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿದೆ. ಪ್ರತಿ ದಿನ ಬೇರೆ ಬೇರೆ ಉಪಾಹಾರ ಹಾಗೂ ಊಟವನ್ನು ಸಿದ್ಧಪಡಿಸಿ ನೀಡಲಾಗುತ್ತದೆ.

ಕ್ಯಾಂಟೀನ್ ಹತ್ತಿರವೇ ಬಸ್ ನಿಲ್ದಾಣವೂ ಇದೆ. ಗ್ರಾಮೀಣ ಭಾಗದ ಬಡ ಜನರಿಗೆ ಈ ಕ್ಯಾಟೀನ್ ಹೆಚ್ಚು ಆಸರೆಯಾಗಲಿದೆ’ ಎಂದು ಅಭಿಪ್ರಾಯ ಪಟ್ಟರು ಈ ಸಂರ್ಭದಲ್ಲಿ ಪಟ್ಟಣದ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಅನೇಕ ಸಂಘನೆಯ ಮುಖಂಡರು. ಮತ್ತು ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮೈಬೂಬಬಾಷ.ಮನಗೂಳಿ.ತಾಳಿಕೋಟೆ