ನಗರದಲ್ಲಿ ಡಿ.ಎಸ್.ಎಸ್ ಸಮಿತಿಯ ಅಂಬೇಡ್ಕರ್ ವಾದ ತಾಲೂಕು – ಸಮಿತಿಯಿಂದ ಬೃಹತ್ ಪ್ರತಿಭಟನೆ.

ರೋಣ ಜು.18

ನಗರದಲ್ಲಿ ತಹಸೀಲ್ದಾರ್ ಕಛೇರಿಯ ಎದುರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಅಂಬೇಡ್ಕರ್ ವಾದ ತಾಲೂಕು ಸಮಿತಿಯ ವತಿಯಿಂದ ಜುಲೈ 18 ರಂದು ದಲಿತರ ಭೂಮಿ ಮತ್ತು ವಸತಿ ಹಕ್ಕುಗಳಿಗಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಈ ಸಮಯದಲ್ಲಿ ಸಂಘಣೆಯ ಎಲ್ಲಾ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಪ್ರತಿಭಟನೆಯ ಪ್ರಮುಖ ಉದ್ದೇಶ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರವಾದ) ರೋಣ ಒತ್ತಾಯಿಸುವುದೇನೆಂದರೆ ದಲಿತರ ಭೂಮಿ- ವಸತಿ ಹಕ್ಕಿಗಾಗಿ ಮತ್ತು ಇತರೇ ಹಕ್ಕೋತ್ತಾಯಗಳಾದ ಪರಿಶಿಷ್ಟ ಜಾತಿ/ವರ್ಗ ಹಾಗೂ ಭೂಹೀನ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಬಗರ್ ಹುಕುಂ ಸಾಗುವಳಿ (ದರಖಾಸ್ತು ಮಂಜೂರಾತಿ ಸಕ್ರಮೀಕರಣ) ಕಾಲಮಿತಿಯೊಳಗಾಗಿ ಇತ್ಯರ್ಥ ಗೊಳಿಸಬೇಕು. ವಿನಾಕಾರಣ ವಜಾ ಗೊಳಿಸಿರುವ ಬಗರ್ ಹುಕುಂ ಸಾಗುವಳಿಯ ಅರ್ಜಿಗಳನ್ನು ಮರು ಪರಿಶೀಲಿಸಬೇಕು. ನಂತರ ಪರಿಶಿಷ್ಟರ ಪಿ.ಟಿ.ಸಿ.ಎಲ್. ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯನ್ನು ಮಾನ್ಯ ಮಾಡದ ಕಂದಾಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಹೈಕೋರ್ಟಗಳಲ್ಲಿ ಪಿ.ಟಿ.ಸಿ.ಎಲ್. ಪ್ರಕರಣಗಳು ವಜಾ ಗೊಳ್ಳುತ್ತಿದ್ದು, ನುರಿತ ಹಿರಿಯ ವಕೀಲರನ್ನು ನೇಮಿಸಿ ಈ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಬೆಂಗಳೂರು ನಗರ ಜಿಲ್ಲೆ ಪೂರ್ವ ತಾಲೂಕಿನ ಕಾಡುಗೋಡಿ ಪ್ಲಾಂಟೇಷನ್‌ನಲ್ಲಿ ಪರಿಶಿಷ್ಟ ಜಾತಿಯವರಿಗೆ ಮಂಜೂರಾಗಿರುವ ಭೂಮಿಯಲ್ಲಿ ಅರಣ್ಯ ಅಧಿಕಾರಿಗಳು ಒಕ್ಕಲೆಬ್ಬಿಸುವುದನ್ನು ಕೂಡಲೇ ತಡೆಗಟ್ಟಬೇಕು. ಅಧಿಕಾರಿಗಳ ವಿರುದ್ಧ ಎಸ್.ಸಿ/ಎಸ್.ಟಿ. ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಕೈಗಾರಿಕೆ ಸ್ಥಾಪನೆ ನೆಪದಲ್ಲಿ ಕೆ.ಐ.ಎ.ಡಿ.ಬಿ ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಗುರುತಿಸಿರುವ 1777 ಎಕರೆ ಫಲವತ್ತಾದ ಕೃಷಿ ಭೂಮಿಯ ಭೂಸ್ವಾದೀನ ನಿರ್ಧಾರವನ್ನು ಸರ್ಕಾರ ಕೂಡಲೇ ಹಿಂಪಡೆಯ ಬೇಕು. ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣ ನಿರ್ವಹಣೆಗೆ ಸರ್ಕಾರ ಸ್ಥಾಪಿಸಿರುವ ಡಿ.ಸಿ.ಆರ್‌.ಇ ಪೊಲೀಸ ಠಾಣೆಗಳಿಗೆ ಅಗತ್ಯವಿರುವ ಸಿಬ್ಬಂದಿ ಮತ್ತು ಮೂಲಭೂತ ಸೌಕರ್ಯ ಒದಗಿಸಬೇಕು. ಎಸ್‌ಸಿ/ಪಿ-ಟಿಎಸ್‌/ಪಿ ನಿರ್ವಹಣೆಗೆ ಪ್ರತ್ಯೇಕ ನಿರ್ದೇಶನಾಲಯ ಅಥವಾ ಏಕಗವಾಕ್ಷಿ ಯೋಜನೆ ವ್ಯವಸ್ಥೆ ಜಾರಿಗೊಳಿಸ ಬೇಕು. ಸಮಾಜ ಕಲ್ಯಾಣ ಇಲಾಖೆ ಅಡಿಯ ವಿದ್ಯಾರ್ಥಿ ನಿಲಯಗಳನ್ನು ಉನ್ನತೀಕರಣ ಗೊಳಿಸಿ, ಪರಿಶಿಷ್ಟ ವಿದ್ಯಾರ್ಥಿಗಳಿಗೆ ನಿಗದಿತ ಅವಧಿ ಯೊಳಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು. ಗದಗ ನಗರದಲ್ಲಿ ದ.ಸಂ.ಸ ಸಂಸ್ಥಾಪಕ ಮಹಾತ್ಮ ಪ್ರೊ, ಬಿ.ಕೃಷ್ಣಪ್ಪ ಮಹಾ ಪರಿನಿಬ್ಬಾಣ ಹೊಂದಿರುವ ನಿಮಿತ್ಯ ಅವರ ನೆನಪಿಗಾಗಿ ಗದಗ ನಗರದಲ್ಲಿ ಮಹಾತ್ಮ ಪ್ರೊ, ಬಿ.ಕೃಷ್ಣಪ್ಪ ಸ್ಮಾರಕ ಭವನವನ್ನು ನಿರ್ಮಿಸಬೇಕೆಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿ ರೋಣ ತಹಶೀಲ್ದಾರ ಇವರ ಮುಖಾಂತರ ಮನವಿ ಸಲ್ಲಿಸಲಾಯಿತು. ಈ ಸಮಯದಲ್ಲಿ ಹನುಮಂತ್ ಚಲವಾದಿ, ಅಶೋಕ್ ತಾಳದವರ, ಚಂದ್ರು ಮಾದರ್, ಶರಣು ಚಲವಾದಿ ಮಂಜುನಾಥ್ ಚಲವಾದಿ, ಶಿವರಾಜ್ ಅಮರಾವತಿ, ಪಕೀರಪ್ಪ ಮಾದರ್, ಹನುಮಂತ್ ಚಲವಾದಿ ಮುದೇನಗುಡಿ ಪ್ರದೀಪ್ ಕಾಳೆ,ಆದಿತ್ಯ ದೊಡ್ಡಮನಿ, ಮಂಜುನಾಥ್ ಹಾದಿಮನಿ, ಪ್ರಮೋದ್ ಚಲವಾದಿ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ. ರೋಣ.ಗದಗ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button