ಜಿಲ್ಲಾ ಕಾನಿಪ ಸಂಘದ ವತಿಯಿಂದ ವಿದ್ಯಾರ್ಥಿನಿ ಭಾಗ್ಯಶ್ರೀ ಕುಂಬಾರ – ಅವರಿಗೆ ಪ್ರತಿಭಾ ಪುರಸ್ಕಾರ.
ಮುದ್ದೇಬಿಹಾಳ ಜು.21

ವಿಜಯಪುರ ನಗರದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶನಿವಾರ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಕಾರ್ಯಕ್ರಮ ನಡೆಯಿತು.ಮುದ್ದೇಬಿಹಾಳ ತಾಲ್ಲೂಕು ಪತ್ರಕರ್ತ ಬಸವರಾಜ ಈ ಕುಂಬಾರ ಅವರ ಮಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ನಾಗರಬೆಟ್ಟ ಎಸ್.ಡಿ.ಕೆ ಪ್ರೌಢ ಶಾಲೆಯ ವಿದ್ಯಾರ್ಥಿನಿ ಭಾಗ್ಯಶ್ರೀ ಬಸವರಾಜ ಕುಂಬಾರ (ಚವನಭಾವಿ) ಅವರಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ಪ್ರತಿಭಾ ಪುರಸ್ಕಾರ, ನಗದು ಬಹುಮಾನ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಕಾರ್ತನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ, ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ, ಹಿರಿಯ ಪತ್ರಕರ್ತ ಗೋಪಾಲ ನಾಯಕ, ಜಿಲ್ಲಾಧ್ಯಕ್ಷ ಪ್ರಕಾಶ ಬೆನ್ನೂರ.

ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷ ಇಂದುಶೇಖರ ಮಣೂರ, ರಾಷ್ಟ್ರೀಯ ಮಂಡಳಿ ಸದಸ್ಯ ಮಹೇಶ ವಿ. ಶಟಗಾರ, ರಾಜ್ಯ ಸಮಿತಿ ಸದಸ್ಯರಾದ ಕೆ.ಕೆ ಕುಲಕರ್ಣಿ, ಕೌಶಲ್ಯಾ ಪನಾಳಕರ, ಎಸ್ಪಿ ಲಕ್ಷಣ ನಿಂಬರಗಿ, ಡಿವೈಎಸ್ಪಿ ಬಸವರಾಜ ಯಲಿಗಾರ, ಮಹಾ ನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಅಮರೇಶ ದೊಡಮನಿ, ಜಿಲ್ಲಾ,ತಾಲ್ಲೂಕು ಕಾನಿಪ ಸಂಘದ ಸದಸ್ಯರು ಸೇರಿದಂತೆ ಭಾಗವಹಿಸಿದ್ದರು.
ವರದಿ:ಮುತ್ತು.ಬೀರಗೊಂಡ.ಢವಳಗಿ.ಮುದ್ದೇಬಿಹಾಳ