ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸ ಬೇಕು – ಎ.ಬಿ.ವಿ.ಪಿ ಕಾರ್ಯಕರ್ತರ ಆಗ್ರಹ.
ರೋಣ ಜು.24

ಪಟ್ಟಣದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ವಸತಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಆಗ್ರಹಿಸಿ ಎ.ಬಿ.ವಿ.ಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯು ಪಟ್ಟಣದ ಶ್ರೀ ಶರಣಬಸವೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ದಿಂದ ಸಣ್ಣಸಾಧು ಅಜ್ಜನ ಮಠದಿಂದ ಸೂಡಿ ವೃತ್ತ, ಮೂಲ್ತಾನ ಭಾವಿ ವೃತ್ತ ಮಾರ್ಗವಾಗಿ ಪೋತರಾಜ ಕಟ್ಟೆಯ ವರೆಗೆ ಪ್ರತಿಭಟನೆ ನಡೆಸಿದರು. ಈ ವೇಳೆ ಶ್ರೀ ಶರಣಬಸವೇಶ್ವರ ವಿದ್ಯಾರ್ಥಿಗಳು ರಸ್ತೆ ಸಂಚಾರ ತಡೆ ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಎ.ಬಿ.ವಿ.ಪಿ ನಗರ ಕಾರ್ಯದರ್ಶಿ ಸಚಿನ್ ಕುಂದರಗಿ ಮಾತನಾಡಿ, ಕಾಲೇಜು ಆರಂಭವಾಗಿ ಎರಡು ತಿಂಗಳಾದರು ವಸತಿ ನಿಲಯಗಳ ಪ್ರವೇಶಾತಿ ಪೂರ್ಣ ಗೊಂಡಿಲ್ಲ. ಜೊತೆಗೆ ಕಳೆದ ಐದು ವರ್ಷಗಳಿಂದ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿಲ್ಲ. ಇದರಿಂದ ಬಡ ವಿದ್ಯಾರ್ಥಿ ಗಳಿಗೆ ತೊಂದರೆ ಯಾಗುತ್ತಿದೆ. ಕೂಡಲೇ ಸರ್ಕಾರ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು. ಮನವಿ ಸ್ವೀಕರಿಸಲು ತಹಶೀಲ್ದಾರರು ಪ್ರತಿಭಟನಾ ಸ್ಥಳಕ್ಕೆ ಆಗಮಿಸ ಬೇಕು ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದರು. ಬಳಿಕ ಉಪ ತಹಶೀಲ್ದಾರ್ ಜೆ.ಟಿ ಕೊಪ್ಪದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು. ಈ ಸಮಯದಲ್ಲಿ ಎ.ಬಿ.ವಿ.ಪಿ ಕಾರ್ಯಕರ್ತರು ಹಾಗೂ ಶ್ರೀ ಶರಣಬಸವೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ.ರೋಣ.ಗದಗ