ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ಹೊಂಬಾಳೆ ರೇವಣ್ಣ ನೇಮಕ.
ಹುರುಳಿಹಾಳ್ ಫೆಬ್ರುವರಿ.8

ಕಾನ ಹೊಸಹಳ್ಳಿ ಸಮೀಪದ ಹುರಳಿಹಾಳ್ ಗ್ರಾಮದ ಹೊಂಬಾಳೆ ರೇವಣ್ಣ ಅವರನ್ನು ವಿಜಯನಗರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ರೈತ ಮೋರ್ಚಾ ಅಧ್ಯಕ್ಷರನ್ನಾಗಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ನೇಮಿಸಿ ಆದೇಶ ಹೊರಡಿಸಿದ್ದಾರೆ. ಈ ವೇಳೆ ನೂತನ ವಿಜಯನಗರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ರೈತ ಮೋರ್ಚಾ ಜಿಲ್ಲಾಧ್ಯಕ್ಷರು ಹೊಂಬಾಳೆ ರೇವಣ್ಣ ಅಧಿಕಾರ ಸ್ವೀಕರಿಸಿ ಮಾತನಾಡಿ ಬಿಜೆಪಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ವಹಿಸಿಕೊಂಡು ಜಿಲ್ಲೆಯ ಹಳ್ಳಿ ಹಳ್ಳಿಗಳಿಗೆ ಹೋಗಿ ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ಪಕ್ಷವನ್ನು ಸಂಘಟಿಸುತ್ತೇನೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ಕ್ಷೇತ್ರಗಳಲ್ಲಿಯೂ ಬಿಜೆಪಿ ಹೆಚ್ಚಿನ ಮತ ಗಳಿಸಲು ಶ್ರಮಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಸನ್ಮಾನಿಸಿ ಅಭಿನಂದಿಸಿದರು.
ಹೋಬಳಿ ವರದಿಗಾರರು:ಕೆ.ಎಸ್.ವೀರೇಶ್.ಕಾನಾ ಹೊಸಹಳ್ಳಿ