ಆಗಸ್ಟ್ 3. ರಂದು ಚುಟುಕು ಸಾಹಿತ್ಯ – ಕಾರ್ಯಕ್ರಮ ಆಯೋಜನೆ.
ಮಾನ್ವಿ ಜು.31

ಉದಯೋನ್ಮುಖ ಕವಿಗಳಿಗೆ ಅವಕಾಶ ಕಲ್ಪಿಸುವ ಸಲುವಾಗಿ ಮಾನ್ವಿ ಪಟ್ಟಣದ ತಾಲೂಕ ಪಂಚಾಯತಿ ಸಭಾಂಗಣದಲ್ಲಿ ಆಗಸ್ಟ್ 3 ರಂದು ಬೆಳಿಗ್ಗೆ 10 ಗಂಟೆಗೆ ಚುಟುಕು ಸಾಹಿತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ತು ಮಾನ್ವಿ ಅಧ್ಯಕ್ಷ ಮಹಮ್ಮದ್ ಮುಜೀಬ್ ತಿಳಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮಾನ್ವಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ ಚುಟುಕು ಸಾಹಿತ್ಯ ಕಾರ್ಯ ಚಟುವಟಿಕೆ ಉದ್ಘಾಟನೆ ಹಾಗೂ ಪದಗ್ರಹಣ ನಡೆಯಲಿದ್ದು. ಉದ್ಘಾಟಕರಾಗಿ ಬಸವಪ್ರಭು ಪಾಟೀಲ್ ಬೆಟ್ಟದೂರು. ಜಿಲ್ಲಾಧ್ಯಕ್ಷರಾದ ನರಸಿಂಗರಾವ್ ಸರಕಿಲ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಮಾನ್ವಿಯಲ್ಲಿ ಸಮಾಜ ಸೇವೆ ಹಾಗೂ ಸಾಧನೆ ಮಾಡಿದವರಿಗೆ ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು. ಚುಟುಕು ಕವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕು ಎಂದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ