ಎಸ್.ವಿ.ವಿ.ಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಡಾ, ಶ್ರೀ ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ – ಆಗಸ್ಟ್ 01 ರಂದು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಿಸಿದರು.
ಢವಳಗಿ ಆ.01

ಮುದ್ದೇಬಿಹಾಳ ತಾಲ್ಲೂಕಿನ ಢವಳಗಿ ಗ್ರಾಮದ ಎಸ್.ವಿ.ವಿ.ಎಸ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಡಾಕ್ಟರ್, ಶ್ರೀ ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಅಂಗವಾಗಿ ಅಗಷ್ಟ 1 ರಂದು ವ್ಯಸನ ಮುಕ್ತ ದಿನಾಚರಣೆಯನ್ನಾಗಿ ಆಚರಣೆ ಮಾಡಲಾಯಿತು. ಕಾಲೇಜು ಪ್ರಾಂಶುಪಾಲರಾದ ನಾಗೇಶ.ಬಿರಾಜದಾರ ಅವರು ಕಾಲೇಜು ವಿದ್ಯಾರ್ಥಿಗಳಿಗೆ ವ್ಯಸನ ಚಟದಿಂದ ತಮ್ಮ ಜೀವನಕ್ಕೆ ಮತ್ತು ಸಮಾಜಕ್ಕೆ ಆಗುವ ತೊಂದರೆಗಳ ಬಗ್ಗೆ ವಿವರಿಸಿ ಮಾತನಾಡಿದರು. ಇದೇ ವೇಳೆಯಲ್ಲಿ ಉಪನ್ಯಾಸಕರಾದ ಎಚ್.ಎಮ್ ಚವ್ಹಾಣ, ವಿ.ಕೆ ಮಾಲಗತ್ತಿ, ಗ್ರಂಥಪಾಲಕರಾದ ಖಾನಾಪೂರ್ ಸರ್ ಸೇರಿದಂತೆ ಸಿಬ್ಬಂದಿಗಳು ಇದ್ದರು ಎಂದು ವರದಿಯಾಗಿದೆ.
ವರದಿ:ಜಿ.ಎನ್ ಬೀರಗೊಂಡ.ಢವಳಗಿ.ಮುದ್ದೇಬಿಹಾಳ