ಗುರು ಸ್ವಂದನಾ ಕಾರ್ಯಕ್ರಮ ಉದ್ಘಾಟನೆ ಮಾಡಿದ – ಶಾಸಕ ರಾಜುಗೌಡ ಪಾಟೀಲ.
ದೇವರ ಹಿಪ್ಪರಗಿ ಆ.02

ದೇವರ ಹಿಪ್ಪರಗಿ ಪಟ್ಟಿಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಯವರ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಜಿಲ್ಲಾ ಪಂಚಾಯತ ಶಾಲಾ ಶಿಕ್ಷಕ ಮತ್ತು ಸಾಕ್ಷರತಾ ಇಲಾಖೆ ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯ ಅಧಿಕಾರಿಗಳು ಕಾರ್ಯಾಲಯ ಸಿಂದಗಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕ ದೇವರ ಹಿಪ್ಪರಗಿ ಇವರು ಸಹಯೋಗದಲ್ಲಿ ನಡೆದ ಗುರು ಸ್ವಂದನಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.

ದೇವರ ಹಿಪ್ಪರಗಿ ಮತ ಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ ಕುದರಿ ಸಾಲವಾಡಗಿಯವರು.ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾಹಾಂತೇಶ ಯಡ್ರಾಮಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಜಿ.ಎಸ್ ಬೆವನೂರ, ತಾಲ್ಲೂಕು ಅಧ್ಯಕ್ಷರಾದ ಎ.ಎಚ್ ವಾಲಿಕಾರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಜಿ.ಪಿ ಬಿರಾದಾರ ಹಾಗೂ ತಾಲೂಕಿನ ಎಲ್ಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತಾಲೂಕು ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಭೀಮಪ್ಪ ಹಚ್ಯಾಳ.ದೇವರ ಹಿಪ್ಪರಗಿ