ಪಟ್ಟಣದಲ್ಲಿ ಸಡಗರ ಸಂಭ್ರಮ ದಿಂದ 79 ನೇ. ಸ್ವಾತಂತ್ರ್ಯ – ದಿನ ಆಚರಿಸಲಾಯಿತು.
ಆಲಮೇಲ ಆ.16

ಸರಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕ ಆಡಳಿತದಿಂದ 79 ನೇ. ಸ್ವತಂತ್ರೋತ್ಸವ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಯಿತು.ಆಲಮೇಲ ತಹಶೀಲ್ದಾರರಾದ ಶ್ರೀ ಧನಪಾಲಶೆಟ್ಟಿ ದೇವೂರ ಧ್ವಜಾರೋಹಣ ನೆರವೇರಿಸಿದರು. ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶ್ರೀ ಸುರೇಶ್ ನಾಯಕ್ ಮುಖ್ಯಾಧಿಕಾರಿಗಳು ಪಟ್ಟಣ ಪಂಚಾಯತ ಆಲಮೇಲ, ಅರವಿಂದ್ ಅಂಗಡಿ ಪಿ.ಎಸ್.ಐ ಆಲಮೇಲ, ಮೊಹಮ್ಮದ್ ಸಾಧಿಕ್ ಸುಂಬಡ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಮತ್ತು ಅಶೋಕ್ ಕೊಳಾರಿಗಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು, ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಪಟ್ಟಣದ ಎಲ್ಲಾ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಆಲಮೇಲ ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಅರವಿಂದ್ ಅಂಗಡಿ ಧ್ವಜಾರೋಹಣ ನೆರವೇರಿಸಿದರು. ಆಲಮೇಲ ಪೊಲೀಸ್ ಇಲಾಖೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಮುದಾಯ ಆರೋಗ್ಯ ಕೇಂದ್ರ ಆಲಮೇಲ 79 ನೇ. ಸ್ವತಂತ್ರೋತ್ಸವದ ಧ್ವಜಾರೋಹಣ ವೈದ್ಯಾಧಿಕಾರಿಗಳಾದ ಡಾಕ್ಟರ್ ಪೂಜಾ ಪಾಟೀಲ್ ನೆರವೇರಿಸಿದರು.

ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ ಮತ್ತು ಆಶಾ ಕಾರ್ಯಕರ್ತೆಯರು ಭಾಗಿಯಾಗಿದ್ದರು. ತಾಲೂಕ ಪಂಚಾಯತಿ ಕಾರ್ಯಾಲಯದಲ್ಲಿ ಸಿದ್ದರಾಮ್ ಎಸ್ ಅಂಕಲಗಿ ಧ್ವಜಾರೋಹಣವನ್ನು ನೆರವೇರಿಸಿದರು ಇದೇ ಸಂದರ್ಭದಲ್ಲಿ ತಾಲೂಕು ಕೆಡಿಪಿ ಸದಸ್ಯರು, ತಾಲೂಕ ಪಂಚಾಯತಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ರೇವಣಸಿದ್ದಯ್ಯ.ಜಿ.ಹಿರೇಮಠ.ಆಲಮೇಲ