ಭೂಮಿ ವಸತಿ “ಹಕ್ಕು ಮಾನ್ಯ ಮಾಡುವ” – ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹ.
ತರೀಕೆರೆ ಆ .21
ದಿವಂಗತ/ ದೇವರಾಜ ಅರಸು ರವರು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿಯ ಮೂಲಕ ಉಳುವವನೇ ಭೂಮಿಯ ಒಡೆಯ ಕಾಯ್ದೆಯನ್ನು ಜಾರಿಗೆ ತಂದರು. ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷರಾದ ಎಂ.ಓಂಕಾರಪ್ಪ ನವರು ಇಂದು ಪಟ್ಟಣದ ತಾಲೂಕಾ ಆಡಳಿತ ಕಚೇರಿಯ ಮುಂದಿನ ಡಾ. ಬಿ.ಆರ್ ಅಂಬೇಡ್ಕರ್ ರವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಇಂದು ದಿವಂಗತ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ರವರ 110 ನೇ. ಜನ್ಮದಿನದ ಪ್ರಯುಕ್ತ ವಿವಿಧ ದಲಿತ ಸಂಘಟನೆಗಳ ಮುಖಂಡರೊಂದಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಮಾಡಿ ಅವರ ಪುತ್ಥಳಿಯ ಎದುರು ಪತ್ರಿಕಾಗೋಷ್ಠಿ ನಡೆಸಿದರು. ಬಗರ್ ಹುಕುಂ ಸಾಗುವಳಿದಾರರು ಅರ್ಜಿ ಸಲ್ಲಿಸಿದ್ದು ರಾಜ್ಯ ಸರ್ಕಾರದ ಲೆಕ್ಕದಲ್ಲಿ 33 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಇದ್ದು ಇದರಲ್ಲಿ ಶೇ% 90 ರಷ್ಟು ಅರ್ಜಿಗಳನ್ನು ತಿರಸ್ಕರಿಸಿ ವಿಲೇವಾರಿ ಮಾಡಿದೆ. ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿ ಮಾಡದೆ ಅರಣ್ಯ ಅಧಿಕಾರಿಗಳು ಪರಿಸರದ ಹೆಸರಿನಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದು ಆದಿವಾಸಿ ಇನ್ನಿತರೆ ಜನ ಸಮುದಾಯಗಳಿಗೆ ಸಂವಿಧಾನ ಬದ್ಧ ಹಕ್ಕನ್ನು ನಿರಾಕರಿಸಲಾಗುತ್ತಿದೆ ಕಾನೂನು ಬದ್ಧವಾಗಿರುವ ಅರಣ್ಯ ಹಕ್ಕು ಕಾಯ್ದೆಯನ್ನು ನಿರ್ಜೀವ ಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.

ಉಳುವವನೇ ಭೂ ಒಡೆಯ ನೀತಿಯನ್ನು ಜಾರಿ ಮಾಡದಂತೆ ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುವ ಸರ್ಕಾರವಾಗಿ ಸಾಗುವಳಿ ಮಾಡುತ್ತಾ ಅರ್ಜಿ ಸಲ್ಲಿಸಿರುವರಿಗೆ ಭೂ ಮಂಜೂರಾತಿ ನೀಡಲು ಒನ್ ಟೈಮ್ ಸೆಟ್ಲ್ಮೆಂಟ್ ಜಾರಿ ಮಾಡುವ ಮೂಲಕ ಬಡವರಿಗೆ ನ್ಯಾಯ ದೊರಕಿಸ ಬೇಕೆಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಆಗ್ರಹಿಸುತ್ತಿದೆ ಎಂದು ಹೇಳಿದರು. ಮಹಾತ್ಮ ಪ್ರೊ, ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ತರೀಕೆರೆ ಎನ್ ವೆಂಕಟೇಶ್, ಜಿಲ್ಲಾ ಸಂಘಟನಾ ಸಂಚಾಲಕರಾದ ಎಚ್.ವಿ ಬಾಲರಾಜ್, ತಾಲೂಕು ಸಂಚಾಲಕರಾದ ರಾಜಪ್ಪ, ಕುಮಾರಪ್ಪ, ಮಂಜಪ್ಪ, ಸಿದ್ದರಾಮಪ್ಪ, ಶಿವರಾಜ್, ಪರಮೇಶ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್. ವೆಂಕಟೇಶ್.ತರೀಕೆರೆ.ಚಿಕ್ಕಮಗಳೂರು