ಸಿಹಿ ಕಹಿ ಪತ್ರಿಕೆ ವರದಿಗೆ ಬಿಗ್ ಇಂಪ್ಯಾಕ್ಟ್ವಸತಿ ನಿಲಯಕ್ಕೆ ಭೇಟಿ ನೀಡಿದ ಅಧಿಕಾರಿಗಳು ಮೂಲಭೂತ ಸೌಕರ್ಯಗಳ – ಪೂರೈಕೆಗೆ ಭರವಸೆ ನೀಡಿದರು.
ಮುಶಿಗೇರಿ ಆ.22

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಮುಶಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಡಿ.ದೇವರಾಜ ಅರಸು ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿರುವ ವಿದ್ಯಾರ್ಥಿಗಳು ಮೂಲ ಸೌಕರ್ಯಗಳ ಸಮಸ್ಯೆಯನ್ನು ಎದುರಿಸುತ್ತಿದ್ದು, ಅಭ್ಯಾಸ ಮಾಡಲು ಸಮಸ್ಯೆ ಆಗುತ್ತಿದೆ. ಎಂದು ಹೇಳುತ್ತಿದ್ದರು ಈ ವಿಷಯವಾಗಿ ನಮ್ಮ ಸಿಹಿ ಕಹಿ ಪತ್ರಿಕೆಯಲ್ಲಿ ವರದಿ ಬಿತ್ತರಿಸಲಾಗಿತ್ತು. ಈ ವರದಿಗೆ ಎಚ್ಚತ್ತುಕೊಂಡ ಅಧಿಕಾರಿಗಳು ಹಾಗೂ ನಿಲಯದ ಮೇಲ್ವಿಚಾರಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಲಿಖಿತ ಆಧಾರ ತೆಗೆದುಕೊಂಡು ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹಂತ ಹಂತವಾಗಿ ನೀಡುವುದಾಗಿ ಅಧಿಕಾರಿಗಳು ತಿಳಿಸಿದರು ಇವರ ಈ ಕಾರ್ಯಕ್ಕೆ ನಮ್ಮ ಸಿಹಿ ಕಹಿ ಪತ್ರಿಕೆಯ ಪರವಾಗಿ ದನ್ಯವಾದಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ.ರೋಣ.ಗದಗ