ರಕ್ತದಾನ ಅತ್ಯಂತ – ಶ್ರೇಷ್ಠವಾದ ದಾನ.
ಕಲಬುರ್ಗಿ ಆ.22

ಎಲ್ಲಾ ದಾನಗಳಿಗಿಂತ ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದ್ದು, ರಕ್ತದಾನವು ಹಲವರ ಪ್ರಾಣ ಉಳಿಸಲು ನೆರವಾಗುತ್ತದೆ ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಗೌರವಾಧ್ಯಕ್ಷರು ಬಸವರಾಜ ಹಡಪದ ಸುಗೂರ.ಎನ್ ಹೇಳಿದರು. ನಗರದ ಓಲ್ಡ್ ಆರ್.ಟಿ.ಓ ಆಫೀಸ್ ರಸ್ತೆಯ, ನವ ಜೀವನ ರಕ್ತ ಸಂಗ್ರಾಹಲಯದಲ್ಲಿ ಹಡಪದ ಅಪ್ಪಣ್ಣ ಸಮಾಜದ ಪದಾಧಿಕಾರಿಗಳು ತುರ್ತು ಪರಿಸ್ಥಿತಿಯ ಸಂಧರ್ಭದಲ್ಲಿ ರಕ್ತದಾನ ದಾನ ನೀಡುವ ಸಂದರ್ಭದಲ್ಲಿ ಮಾತನಾಡಿದರು.ದೇಶದಲ್ಲಿ ಹಾಗೂ ರಾಜ್ಯದಲ್ಲಿ ಮತ್ತು ನಮ್ಮ ನಗರದಲ್ಲಿ ಪ್ರತಿ ನಿತ್ಯ ಸಾವಿರಾರು ರೋಗಿಗಳಿಗೆ ರಕ್ತದ ಅವಶ್ಯಕತೆ ತುಂಬಾ ಇದೆ. ಆರೋಗ್ಯವಂತ ಪ್ರತಿಯೊಬ್ಬರು ಯಾವುದೇ ತಪ್ಪು ಕಲ್ಪನೆ ಇಟ್ಟುಕೊಳ್ಳದೆ, ರಕ್ತದಾನ ಮಾಡುವ ಮೂಲಕ ಇತರರ ಪ್ರಾಣ ಉಳಿಸಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು. ಅಪಘಾತಕ್ಕೆ ತುತ್ತಾಗಿ ಗಾಯ ಗೊಂಡವರು ಹಾಗೂ ಇತರೆ ಅನಾರೋಗ್ಯ ಪೀಡಿತರಿಗೆ ತುರ್ತಾಗಿ ರಕ್ತದ ಅವಶ್ಯಕತೆ ಇದ್ದಾಗ ಅವರು ಪಡುವ ಸಂಕಷ್ಟ ಅಷ್ಟಿಷ್ಟಲ್ಲ. ಅಂತವರ ನೋವು, ಕಷ್ಟಗಳನ್ನು ನೋಡಿ ಪ್ರತಿಯೊಬ್ಬರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಹಲವಾರು ಜೀವ ಉಳಿಸಲು ಸಂಕಲ್ಪ ತೊಡಬೇಕು ಎಂದು ಕಲಬುರಗಿ ಜಿಲ್ಲೆಯ ಕಾರ್ಯಾದ್ಯಕ್ಷರು ಭಗವಂತ ಸಹ ಶಿಕ್ಷಕರು ಹೊನ್ನ ಕಿರಣಗಿ ಹೇಳಿದರು.ಇದೇ ವೇಳೆ ಕಲಬುರಗಿ ಜಿಲ್ಲೆಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ ಹಡಪದ ಬಗದುರಿ, ಮತ್ತು ಕಲಬುರಗಿ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ಇಸ್ಲಾಂಪೂರೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.ಇದೇ ಸಂಧರ್ಭದಲ್ಲಿ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಹಡಪದ ನೀಲೂರ ಅವರು ಹಾಗೂ ನವ ಜೀವನ ರಕ್ತ ಸಂಗ್ರಾಹಲಯ (ಬ್ಲಡ್ ಕ್ಲಬ್ ನ) ವೀರೇಂದ್ರ ವಾಲಿ. ಶಿವಾನಂದ ದೊಡ್ಮನಿ ಸರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಎಂದು ಕಲಬುರಗಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ.ಬಿ ಹಡಪದ ಸುಗೂರ.ಎನ್ ಅವರು ತಿಳಿಸಿದರು.