ತಾಲೂಕ ಮಟ್ಟದ ಅಧಿಕಾರಿಗಳ ಸಭೆ – ನಡೆಸಿದ ಸಚಿವರು.

ಮಾನ್ವಿ ಆ.26

ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕ ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಿದ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಪರಿಷತ್ತಿನ ಸಭಾ ನಾಯಕರಾದ ಶ್ರೀ ಎನ್.ಎಸ್ ಬೋಸರಾಜು ಹಾಗೂ ಮಾನ್ವಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ್ ಸಾಹುಕಾರ್ ಇವರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಮಾನ್ವಿ ಪುರಸಭೆ ಅಧಿಕಾರಿಗಳಿಗೆ KWS ಅಧಿಕಾರಿಯದ ಚೌಹಾನ್ ಇವರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಾನ್ಯ ಸಚಿವರು ಮತ್ತು ಶಾಸಕರು ನಗರ ಹಾಗೂ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಜೆ.ಜೆ.ಎಂ ಅಮೃತ್ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ ಕಾಮಗಾರಿಯ ಗುಣಮಟ್ಟದ ಪ್ರಮಾಣ ಪತ್ರವನ್ನು ನೀಡ ಬೇಕಾದರೆ ಕಾಮಗಾರಿಯನ್ನು ಸಂಪೂರ್ಣವಾಗಿ ವೀಕ್ಷಿಸಿ ಹಾಗೂ ಕ್ರಮಬದ್ಧವಾಗಿ ಯಾವುದೇ ತರಹದ ಅರ್ಧ ಕೆಲಸವನ್ನು ಮುಗಿಸಿ ಅರ್ಧಕ್ಕೆ ನಿಲ್ಲಿಸಿ ಮತ್ತು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದು ಕೊಳ್ಳದೆ ಇರುವ ಕಾಮಗಾರಿಗಳಿಗೆ ಪ್ರಮಾಣ ಪತ್ರವನ್ನು ನೀವು ನೀಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಮೇಲಾಧಿಕಾರಿಗಳಿಗೆ ವಜಾ ಗೊಳಿಸಲು ಶಿಫಾರಸ್ಸು ಮಾಡಲಾಗುವುದು ಎಂದು ಖಡಕ್ ಸೂಚನೆ ನೀಡಿದರು.

ಲೋಕಾಪಯೋಗಿ ಇಲಾಖೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ವೇಗವನ್ನು ಹೆಚ್ಚಿಸಲು ಇದೇ ಸಂದರ್ಭದಲ್ಲಿ ಮಾನ್ಯ ಸಚಿವರು ಸಂಬಂಧಿಸಿದ JE ಗಳಿಗೆ ಸೂಚನೆ ನೀಡಿದರು.

ಕೃಷಿ ಅಧಿಕಾರಿಗಳಿಗೆ ಎರಡು ತಾಲೂಕಿನಾದ್ಯಂತ ಯೂರಿಯಾ ಗೊಬ್ಬರದ ಸಮಸ್ಯೆ ಆಗದ ರೀತಿಯಲ್ಲಿ ಕಾರ್ಯ ನಿರ್ವಹಿಸಲು ಕಟ್ಟುನಿಟ್ಟಾದ ಸೂಚನೆ ನೀಡಿದರು.

ದುಬಾರಿ ಬೆಲೆಗೆ ಯೂರಿಯಾ ಗೊಬ್ಬರವನ್ನು ಮಾರುವುದು ಕಂಡು ಬಂದಲ್ಲಿ ಅವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲು ಈ ಸಂದರ್ಭದಲ್ಲಿ ಮಾನ್ಯ ಸಚಿವರು ಮತ್ತು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಡಿವೈಎಸ್ಪಿ ಹಾಗು ಪಿ.ಐ ಅವರೊಂದಿಗೆ ಮುಂದಿನ ದಿನಗಳಲ್ಲಿ ನಡೆಯುವ ಹಬ್ಬಗಳಲ್ಲಿ ಶಾಂತಿ ರೀತಿಯಿಂದ ಹಬ್ಬವನ್ನು ಆಚರಿಸಲು ಎಲ್ಲರಿಗೂ ಶಾಂತಿ ಸುವ್ಯವಸ್ಥೆ ರೀತಿಯಲ್ಲಿ ಹಬ್ಬವನ್ನು ಆಚರಿಸಲು ಕಟ್ಟುನಿಟ್ಟಾದ ಸೂಕ್ತ ಬಂದೋಬಸ್ತ್ ಏರ್ಪಡಿಸಲು ಸೂಚಿಸಿದರು.

ನೀರ್ ಮಾನ್ವಿ ಎಲ್ಲಮ್ಮ ದೇವಸ್ಥಾನದ ಕಾಮಗಾರಿ ನಿಧಾನ ಗತಿಯಲ್ಲಿ ಸಾಗಿರುವುದನ್ನು ಮಾನ್ಯ ಸಚಿವರು ಮತ್ತು ಶಾಸಕರ ಗಮನಕ್ಕೆ ಗ್ರಾಮದ ಮುಖಂಡರುಗಳು ಸಚಿವರ ಬಳಿ ತಿಳಿಸಿದಾಗ ಕೂಡಲೇ ಸಚಿವರು ಸಭೆಯಲ್ಲಿದ್ದ ತಾಲೂಕ ದಂಡಾಧಿಕಾರಿ ಹಾಗೂ ದೇವಸ್ಥಾನದ ಕಾರ್ಯದರ್ಶಿಗಳಾದ ಕಂದಾಯ ನಿರೀಕ್ಷಕರನ್ನು ಆದಷ್ಟು ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣ ಗೊಳಿಸಿ ಭಕ್ತಾದಿಗಳಿಗೆ ಆ ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಸೂಚನೆಯನ್ನು ನೀಡಿದರು.

ಇಂದಿನ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಾದ ತಹಸೀಲ್ದಾರ್ ಮಾನ್ವಿ EO TP ಮಾನ್ವಿ, BEO, RFO, ADA, AEE AE, JE PWD, AEE PRED, AEE RWS, AEE GESCOM MANVI & AEE KRIDL, NK, Cashutec, ಮಾನ್ವಿ ಪುರಸಭೆಯ ಮುಖ್ಯ ಅಧಿಕಾರಿಗಳು & Amrut -2 KWS ಎಂಜಿನೀರ್ಸ್ BO, THO ಇನ್ನೂ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button