ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವನಸಿರಿ ಪೌಂಡೇಷನ್ ಸಂಸ್ಥೆಗೆ – ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ.
ಸಿಂಧನೂರಿನ ಅ.10

ವನಸಿರಿ ಪೌಂಡೇಷನ್ ಸಂಸ್ಥೆಯ ಪರಿಸರ ಜಾಗೃತಿಯನ್ನು ಉತ್ತೇಜಿಸುವ ಮತ್ತು ಮಾಲಿನ್ಯ ಮುಕ್ತ ಕರ್ನಾಟಕ ನಿರ್ಮಾಣದ ಗುರಿಯ ಸಾರುವಲ್ಲಿನ ಕಾರ್ಯ ಗುರುತಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ನೇ. ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಬಳ್ಳಾರಿಯ ಸರಕಾರಿ ಪದವಿ ಪೂರ್ವ (ಮಾ.ಪು) ಕಾಲೇಜು ಮೈದಾನದಲ್ಲಿ ನಡೆದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ನೇ. ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪರಿಸರ ಜಾಗೃತಿಯನ್ನು ಉತ್ತೇಜಿಸುವ ಮತ್ತು ಮಾಲಿನ್ಯ ಮುಕ್ತ ಕರ್ನಾಟಕ ನಿರ್ಮಾಣದ ಗುರಿಯ ಸಾರುವಲ್ಲಿ ಸಿಂಧನೂರಿನ ವನಸಿರಿ ಫೌಂಡೇಶನ್ ಸಂಸ್ಥೆಯ ಸಾಧನೆ ಕಾರ್ಯ ವೈಖರಿಯನ್ನು ಗುರುತಿಸಿ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಅಮರೇಗೌಡ ಮಲ್ಲಾಪುರ ಅವರಿಗೆ ಅರಣ್ಯ ಇಲಾಖೆ ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವರಾದ ಶ್ರೀ ಈಶ್ವರ್ ಖಂಡ್ರೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಶ್ರೀ ಪಿ.ಎಂ ನರೇಂದ್ರಸ್ವಾಮಿ ಅವರು ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂಧರ್ಭದಲ್ಲಿ ಸಂಸದರು, ಶಾಸಕರು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಟಧಿಕಾರಿಗಳು, ಪರಿಸರ ವಾಯು ಮಾಲಿನ್ಯ ಅಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇನ್ನಿತರರು ಇದ್ದರು ಎಂದು ವರದಿಯಾಗಿದೆ.

