ಭಗವಂತನನ್ನು ಪ್ರೀತಿಸುವುದನ್ನು ಕಲಿಯಬೇಕು – ಚೇತನ್ ಕುಮಾರ್ ಅನಿಸಿಕೆ.
ಚಳ್ಳಕೆರೆ ಆ.29





ಭಗವಂತನನ್ನು ಪ್ರೀತಿಸುವುದನ್ನು ಕಲಿಯಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂ ಸೇವಕ ಚೇತನ್ ಕುಮಾರ್ ತಿಳಿಸಿದರು. ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಯುವಕ ಯುವತಿಯರಿಗಾಗಿ ಆಯೋಜಿಸಿದ್ದ “ವ್ಯಕ್ತಿತ್ವ ನಿರ್ಮಾಣಕಾರಿ” ತರಗತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು “ಪ್ರೀತಿ” ಎಂಬ ವಿಷಯವಾಗಿ ಉಪನ್ಯಾಸ ನೀಡಿದರು. ನಿಸ್ವಾರ್ಥ ಪ್ರೀತಿಯಿಂದ ದೇವರ ವಿಶ್ವಾಸ ಗಳಿಸಬಹುದು. ಇತ್ತೀಚಿನ ದಿನಗಳಲ್ಲಿ ಸ್ವಾರ್ಥ ಪೂರಿತ ಪ್ರೀತಿಯಿಂದ ಸಮಾಜದ ಸ್ವಾಸ್ಥ್ಯ ಕೆಡುತ್ತಿದೆ.ಆದ್ದರಿಂದ ಪ್ರೀತಿ ಎಂಬ ಸದ್ಗುಣವನ್ನು ನಿತ್ಯ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದ ಆರಂಭದಲ್ಲಿ ಭಜನೆಯನ್ನು ಯತೀಶ್ ಎಂ ಸಿದ್ದಾಪುರ ನಡೆಸಿಕೊಟ್ಟರೆ ಮಾತಾಜೀ ತ್ಯಾಗಮಯೀ ಅವರು ವಿದ್ಯಾರ್ಥಿಗಳಿಗೆ ಧ್ಯಾನಾಭ್ಯಾಸ ಮಾಡಿಸಿದರು. ಈ ತರಗತಿಯಲ್ಲಿ ಜಿ.ಯಶೋಧಾ ಪ್ರಕಾಶ್, ಕವಿತಾ ಗುರುಮೂರ್ತಿ, ವೆಂಕಟಲಕ್ಷ್ಮೀ, ಸಂತೋಷ ಕುಮಾರ ಅಗಸ್ತ್ಯ, ಪುಷ್ಪಲತಾ, ಅಭಿಷೇಕ್ ಚಕ್ರವರ್ತಿ, ಸೃಷ್ಟಿ ಕುರುಬರ್, ಲಲಿತಾ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವರದಿ-ಯತೀಶ್ ಎಂ ಸಿದ್ದಾಪುರ, ಚಳ್ಳಕೆರೆ.