ಹಳ್ಳಕ್ಕೆ ಸೇತುವೆ ನಿರ್ಮಿಸಲು ಜಿಲ್ಲಾಧಿಕಾರಿಗಳಿಗೆ – ಮಹಾಂತೇಶ. ಹಾದಿಮನಿ ಮನವಿ.
ಮಾರ್ಕಬ್ಬಿನಹಳ್ಳಿ ಆ.29





ದೇವರ ಹಿಪ್ಪರಗಿ ತಾಲ್ಲೂಕಿನ ಮಾರ್ಕಬ್ಬಿನಹಳ್ಳಿ ಗ್ರಾಮದ ಊರು ಮುಂದಿನ ಹಳ್ಳವು ಪ್ರತಿ ಮಳೆಗಾಲದಲ್ಲಿ ತುಂಬಿ ಹರಿಯುತ್ತಿದ್ದು, ಸೇತುವೆ ಇಲ್ಲದ ಕಾರಣ ಇಲ್ಲಿನ ಗ್ರಾಮಸ್ಥರು ಮಳೆಗಾಲದಲ್ಲಿ ನಿತ್ಯ ನರಕ ಯಾತನೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಹಳ್ಳಕ್ಕೆ ಸೇತುವೆ ನಿರ್ಮಿಸುವಂತೆ ಒತ್ತಾಯಿಸಿ ಭೀಮ್ ಆರ್ಮಿ ಸಂವಿಧಾನ ರಕ್ಷಕ ದಳ ರಾಜ್ಯ ಸಂಘಟನಾ ಸಂಚಾಲಕರಾದ ಮಹಾಂತೇಶ ಹಾದಿಮನಿ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಈ ಹಳ್ಳದ ಮಧ್ಯೆ ಎರಡು ಸಿಮೆಂಟ್ ಪೈಪ್ ಅಳವಡಿಸಿ ತಾತ್ಕಾಲಿಕವಾಗಿ ಸೇತುವೆ ನಿರ್ಮಿಸಿದ್ದರು. ಆದರೆ ಹಳ್ಳದಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ಪೈಪ್ ಮುಳುಗಿದ್ದು, ಅದರ ಮೇಲೆ ನೀರು ಹರಿಯುತ್ತಿದೆ.

ಹಳ್ಳಕ್ಕೆ ಸಮರ್ಪಕ ಸೇತುವೆ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ತರಹ ಸ್ಪಂದನೆ ದೊರೆತಿಲ್ಲಾ ಎಂದು ಮಹಾಂತೇಶ ಆಕ್ರೋಶ ಹೊರ ಹಾಕಿದ್ದಾರೆ.ಈ ಗ್ರಾಮದಲ್ಲಿ ಯಾರಿಗಾದರೂ ಅನಾರೋಗ್ಯ ಉಂಟಾದರೆ ಆಸ್ಪತ್ರೆಗೆ ತೆರಳ ಬೇಕೆಂದರೆ ಹಳ್ಳ ತುಂಬಿ ಹರಿಯುವುದರಿಂದ ಪಟ್ಟಣಕ್ಕೆ ಸಂಪರ್ಕಿಸಲು ಸಾಧ್ಯವಾಗುದ್ದಿಲ್ಲಾ.
ಈ ಮಾರ್ಕಬ್ಬಿನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆ. ಸರಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಉರ್ದು ಶಾಲೆಗಳು ಇದ್ದು. ಶಿಕ್ಷಕರು ಪಟ್ಟಣ ದಿಂದ ಈ ಗ್ರಾಮಕ್ಕೆ ಬರ ಬೇಕಾದರೆ ಈ ಹಳ್ಳದಾಟಿ ಬರಬೇಕು. ಹಳ್ಳದಲ್ಲಿ ನೀರು ತುಂಬಿ ಹರಿವುದರಿಂದ ಊರಿಗೆ ತಲುಪಲು ಸಾಧ್ಯವಾಗುವುದಿಲ್ಲಾ. ಇಲ್ಲಿನ ಶಾಲಾ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.ಗ್ರಾಮಸ್ಥರು ವಾಣಿಜ್ಯ ವಹಿವಾಟು, ಶಾಲೆ, ಕಾಲೇಜು, ಆಸ್ಪತ್ರೆ, ಸರ್ಕಾರಿ ಕಚೇರಿಗಳಿಗೆ ಪಟ್ಟಣಕ್ಕೆ ತಲುಪ ಬೇಕಾದರೆ. ಗ್ರಾಮದಿಂದ ಸಂಚರಿಸುವ ಜನರಿಗೆ ಊರು ಮುಂದಿನ ಹಳ್ಳ ಅಡ್ಡಿ ಯಾಗಿದೆ. ಈ ಹಳ್ಳಕ್ಕೆ ಸೇತುವೆ ನಿರ್ಮಿಸಲು ದಶಕಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ ಎಂದು ಮಹಾಂತೇಶ ಹಾದಿಮನಿ ದೂರಿದ್ದಾರೆ.
ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚತ್ತು ಕೊಂಡು ಈ ಹಳ್ಳಕ್ಕೆ ಸೇತುವೆ ನಿರ್ಮಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿ ಕೊಡಬೇಕೆಂದು ಒತ್ತಾಹಿಸಿದ್ದಾರೆ.