ರಾಜಕೀಯ ನಾಯಕರ ಸೌಹಾರ್ದ ಭೇಟಿ ನೆಲ್ಲಿಬೆಟ್ಟು ಗಣೇಶೋತ್ಸವದಲ್ಲಿ – ದಿನೇಶ್ ಹೆಗ್ಡೆ ಮೊಳಹಳ್ಳಿ ಭಾಗಿ.
ಉಡುಪಿ ಸ.03

ರಾಜಕೀಯ ನಾಯಕರು ಕೇವಲ ಚುನಾವಣಾ ಕಾಲದಲ್ಲಿ ಮಾತ್ರ ಸಾರ್ವಜನಿಕರೊಂದಿಗೆ ಬೆರೆಯುತ್ತಾರೆ ಎಂಬ ಸಾಮಾನ್ಯ ನಂಬಿಕೆಯನ್ನು ಸುಳ್ಳು ಮಾಡುತ್ತಾ, ಕಾಂಗ್ರೆಸ್ ಮುಖಂಡ ಹಾಗೂ ಕೆ.ಪಿ.ಸಿ.ಸಿ ಸದಸ್ಯರಾದ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರು ಸೌಹಾರ್ದತೆಯ ರಾಜಕಾರಣಕ್ಕೆ ಉತ್ತಮ ನಿದರ್ಶನವಾಗಿದ್ದಾರೆ. ದಿನಾಂಕ 27/08/2025 ರಂದು ಅವರು ನೆಲ್ಲಿಬೆಟ್ಟು ಗಣೇಶೋತ್ಸವದಲ್ಲಿ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿದರು.
ಗಣೇಶೋತ್ಸವದಂತಹ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ರಾಜಕೀಯ ಮುಖಂಡರ ಉಪಸ್ಥಿತಿಯು ಕೇವಲ ರಾಜಕೀಯ ಕಾರ್ಯಸೂಚಿಯ ಭಾಗವಾಗಿರುವುದಿಲ್ಲ, ಬದಲಾಗಿ ಸಮಾಜದಲ್ಲಿ ಸೌಹಾರ್ದ ಮತ್ತು ಸಹ ಬಾಳ್ವೆಯನ್ನು ಬಲ ಪಡಿಸುವ ವೇದಿಕೆ ಯಾಗಿರುತ್ತದೆ. ದಿನೇಶ್ ಹೆಗ್ಡೆ ಅವರು ಜಾತಿ, ಧರ್ಮಗಳ ಭೇದವಿಲ್ಲದೆ ಸಾರ್ವಜನಿಕರೊಂದಿಗೆ ಬೆರೆತು, ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರು. ಇದು ಪ್ರತಿಯೊಬ್ಬ ವ್ಯಕ್ತಿಯ ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗಳಿಗೆ ಗೌರವ ನೀಡುವ ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ.
ಕುಂದಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ತಮ್ಮ ರಾಜಕೀಯ ಕಾರ್ಯ ಚಟುವಟಿಕೆಗಳ ಜೊತೆಗೆ ಸಮಾಜ ಮುಖಿ ಕಾರ್ಯಗಳಲ್ಲೂ ತೊಡಗಿಸಿ ಕೊಂಡಿರುವ ದಿನೇಶ್ ಹೆಗ್ಡೆ, ಸಾರ್ವಜನಿಕರ ಕಷ್ಟ ಸುಖಗಳಿಗೆ ಸ್ಪಂದಿಸುವ ಮೂಲಕ ಜನಪ್ರಿಯರಾಗಿದ್ದಾರೆ. ಅವರ ಈ ರೀತಿಯ ಸರಳ ಮತ್ತು ಸಜ್ಜನಿಕೆಯ ನಡೆಗಳು ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುತ್ತವೆ.
ನೆಲ್ಲಿಬೆಟ್ಟು ಗಣೇಶೋತ್ಸವದಲ್ಲಿ ಅವರ ಉಪಸ್ಥಿತಿಯು, ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಮಾಜವನ್ನು ಒಗ್ಗೂಡಿಸುವ ಶಕ್ತಿಯನ್ನು ಹೊಂದಿದೆ ಎಂಬುದನ್ನು ಸಾಬೀತು ಪಡಿಸಿದೆ. ಇಂತಹ ಸೌಹಾರ್ದಯುತ ನಡೆಗಳು ಇತರ ರಾಜಕೀಯ ನಾಯಕರಿಗೂ ಸ್ಫೂರ್ತಿಯಾಗಲಿ ಎಂದು ಸ್ಥಳೀಯರು ಹಾರೈಸಿದರು ಎಂದು ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್ ಹರ್ಷ ವ್ಯಕ್ತಪಡಿಸಿದೆ.
ವರದಿ:ಆರತಿ.ಗಿಳಿಯಾರು.ಉಡುಪಿ