ಕರ್ನಾಟಕ ರಾಜ್ಯ ಬೇಡರ ಸಮಿತಿ ಹಾಗೂ ಹಳೆ ವಿದ್ಯಾರ್ಥಿಗಳಿಂದ – ಶಿಕ್ಷಕರ ದಿನಾಚರಣೆ.
ನೀರಮಾನ್ವಿ ಸ.06





ಮಾನ್ವಿ ತಾಲೂಕಿನ ಪಿ.ಎಂ ಶ್ರೀ ಸರ್ಕಾರಿ ಶಾಲೆ ನೀರಮಾನ್ವಿಗ್ರಾಮದಲ್ಲಿ ಭಾರತ ಕಂಡ ಶ್ರೇಷ್ಠ ಶಿಕ್ಷಣ ತಜ್ಞ ಮಾಜಿ ರಾಷ್ಟ್ರಪತಿ ಡಾ, ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ, ಗೌರವ ಸಮರ್ಪಿಸ ಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಹಳೆಯ ವಿದ್ಯಾರ್ಥಿಗಳು ನಾವು ನಮ್ಮ ಗುರುಗಳಿಗೆ ಗೌರವ ನೀಡಿದರೆ ನಮಗೆ ನಮ್ಮ ಭವಿಷ್ಯಕ್ಕೆ ಸಹಕಾರಿಯಾಗಲಿದೆ ಅಲ್ಲದೆ ಶಿಕ್ಷಕರು ತೋರಿದ ಮಾರ್ಗದಲ್ಲಿ ನಡೆದರೆ ಮುಂದೆ ಉತ್ತಮ ಸ್ಥಾನಮಾನ ಗಳಿಸಲು ಸಾಧ್ಯ ಎಂದು ಹಳೆಯ ವಿದ್ಯಾರ್ಥಿಗಳು ಅಭಿಪ್ರಾಯ ಪಟ್ಟರು ನಾವು ಇಂದು ಈ ಸ್ಥಾನಮಾನ ಗಳಿಸಲು ಶಿಕ್ಷಕರ ಕೊಡುಗೆ ಅಪಾರ ಇದೆ ಶಿಕ್ಷಕರೇ ನಿಜವಾದ ದೇವರು ಹಾಗೂ ಮಾರ್ಗದರ್ಶಕರು ಎಂದು ತಿಳಿಸಿದರು.
ಪ್ರಭಾರಿ ಮುಖ್ಯ ಗುರುಗಳಾದ ಶ್ರೀ ಸತೀಶ್ ಕುಮಾರ್ ರವರು ಮಾತನಾಡಿ ನಮ್ಮ ಶಾಲೆಯ ಪ್ರಗತಿಗೆ ಈ ಗ್ರಾಮದ ಹಿರಿಯರ ಸಹಕಾರವೇ ಪ್ರಮುಖ ಕಾರಣ ಇಲ್ಲಿ ಇರುವಂತ ಹಳೆಯ ವಿದ್ಯಾರ್ಥಿಗಳ ಸಹಕಾರ ಬಹಳ ಇದೆ ಹಾಗೆ ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಿರುವುದು ಶಿಕ್ಷಕರೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಎಸ್ ಡಿ ಎಂ ಸಿ ಪದಾಧಿಕಾರಿಗಳು ಗ್ರಂಥ ಪಾಲಕರು ಕರ್ನಾಟಕ ರಾಜ್ಯ ಬೇಡರ ಸಮಿತಿ ಬೆಂಗಳೂರು ಗ್ರಾಮ ಘಟಕ ನೀರಮಾನ್ವಿ ಪದಾಧಿಕಾರಿಗಳು ಹಾಗೂ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಂತರ ಶಾಲೆಯ ಶಿಕ್ಷಕರಿಗೆ ಕರ್ನಾಟಕ ರಾಜ್ಯ ಬೇಡರ ಸಮಿತಿ ವತಿಯಿಂದವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಸನ್ಮಾನಿಸಲಾಯಿತು ಹಾಗೆಶಾಲೆಯ ವಿದ್ಯಾರ್ಥಿಗಳು ಶಿಕ್ಷಕರಿಗೆ ಆಟೋಟಗಳನ್ನು ಏರ್ಪಡಿಸಿದ್ದರು. ವಿಜೇತರಾದವರಿಗೆ ಶಾಲೆ ಮಕ್ಕಳು ನೆನಪಿನ ಕಾಣಿಕೆ ಕೊಟ್ಟರು ಲಕ್ಷ್ಮಿ ಟೀಚರ್ ಕಾರ್ಯಕ್ರಮ ನಿರೂಪಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ